''Revenue Village: ಲಂಬಾಣಿ ತಾಂಡಾಗಳಿಗೆ ಕಂದಾಯ ಗ್ರಾಮದ ಭಾಗ್ಯ: ಹಕ್ಕು ಪತ್ರ ವಿತರಣೆಗೆ ಸರ್ಕಾರ ಬದ್ಧ''
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಪ್ರತಿಯೊಂದು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಈಗಾಗಲೇ ಆ ಕೆಲಸ ಪ್ರಾರಂಭಗೊಂಡಿದೆ. ಹತ್ತಾರು ವರ್ಷಗಳಿಂದ ವಾಸವಿರುವವರಿಗೆ ಹಕ್ಕು ಪತ್ರವನ್ನು ಕೂಡ ವಿತರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ತಿಳಿಸಿದರು.
ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಯಚೂರಿನ ಆಶಾ ತಾಂಡದಲ್ಲಿನ ಪ್ರತಿಯೊಂದು ಮನೆಯಲ್ಲೂ ಡಿ ಗ್ರೂಪ್ ನಿಂದ ಹಿಡಿದು ಐಎಎಸ್ ಅಧಿಕಾರಿ ಮಟ್ಟದ ಅಧಿಕಾರಿ ಇರುವುದು ಈ ಸಮುದಾಯದ ಹೆಮ್ಮೆ. ಅದೇ ರೀತಿ ಪ್ರತಿಯೊಂದು ತಾಂಡಾವಾಗಬೇಕು ಎಂದರು.

ಹಿಂದುಳಿದ ಸಮುದಾಯಗಳು ಶಿಕ್ಷಣ, ಹೋರಾಟ ಮತ್ತು ಸಂಘಟನೆಯಾಗಬೇಕು ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಯಾವುದೇ ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಪ್ರತಿಯೊಂದು ಮನೆಯಲ್ಲಿ ಶಿಕ್ಷಣವಂತರಿರಬೇಕು ಎಂದು ಕಿವಿಮಾತು ಹೇಳಿದರು.
ಒಳ ಮೀಸಲಾತಿ: ಅನ್ಯಾಯವಾಗಲು ಬಿಡಲ್ಲ
ಒಳ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಯಾರು ಹೆದರುವ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಇದೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಮಿತಿಯೊಂದನ್ನು ಮಾಡಿದ್ದು, ಸಮಿತಿ ಕಾರ್ಯನ್ಮೋಕವಾಗಿದೆ. ಇನ್ನೂ ದಾವಣಗೆರೆಯ ಸೂರಗೊಂಡನಕೊಪ್ಪದಲ್ಲಿನ ಸೇವಾಲಾಲ್ ಜಯಂತಿ ವೇಳೆ ನಡೆದ ಘಟನೆಗೆ ಅವರು ವಿಷಾದ ವ್ಯಕ್ತಪಡಿಸಿದರು.
ಇನ್ನು ಸಾಧು- ಸಂತರ ಸಾಲಿನಲ್ಲಿ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲೇ ಸಮುದಾಯದ ಏಳ್ಗೆಗಾಗಿ ದುಡಿದ ಸೇವಾಲಾಲ್ ರು, ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸಡ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು ಎಂದು ಸಚಿವರು ಮೆಲುಕು ಹಾಕಿದರು.
ಬಂಜಾರ ಭಾಷೆ 8ನೇ ಅನುಚ್ಚೇದಕ್ಕೆ ಸೇರಿಸಲು ಶಿಫಾರಸು
ಬಂಜಾರ ಭಾಷೆಯನ್ನು ದೇಶದ 8ನೇ ಅನುಚ್ಚೇದಕ್ಕೆ ಸೇರಿಸಬೇಕೆಂಬ ಸಮುದಾಯದ ಮುಖಂಡರ ಬೇಡಿಕೆಗೆ ಸ್ಪಂದಿಸಿದ ಸಚಿವರು, ಈ ಹಿಂದೆ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಅದರೂ ಕೇಂದ್ರ ಸರ್ಕಾರ ಶಿಫಾರಸನ್ನು ತಿರಸ್ಕಾರ ಮಾಡಿದೆ. ಮತ್ತೊಮ್ಮೆ ಬಂಜಾರ ಭಾಷೆಯನ್ನು ಸಂವಿಧಾನದ 8ನೇ ಅನುಚ್ಛೇದಕ್ಕೆ ಸೇರಿಸಲು ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications