ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ: ಸಿದ್ದರಾಮಯ್ಯ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21: ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾ ಬಿಡುವುದಾ ಎಂದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜೆಡಿಎಸ್ ಜೊತೆ ಮೈತ್ರಿ ವಿಚಾರದ ಕುರಿತು ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡಲಿದ್ದೇವೆ, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದರು.

ಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ

ಇಷ್ಟು ಬೇಗ ಉಪ ಚುನಾವಣೆ ಬರುತ್ತದೆ ಎಂಬ ನಿರೀಕ್ಷೆ ಇರಲಿಲ್ಲ, ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯಬಹುದು ಎಂದು ಅಂದಾಜಿಸಲಾಗಿತ್ತು, ನಾವು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.

Alliance With JDS In By-Election What Did Siddaramaiah Say

ಕಾಂಗ್ರೆಸ್‌ಗೆ ಬಿಜೆಪಿಗಿಂತ ಮೊದಲು ಜೆಡಿಎಸ್ ಶತ್ರು ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಅವರು 'ಕುಮಾರಸ್ವಾಮಿಯವರು ಕಾಂಗ್ರೆಸ್‌ನ ಬೆಂಬಲದಿಂದ ಅಧಿಕಾರಕ್ಕೆ ಬಂದಿದ್ದಾರಲ್ಲಾ ಅದಕ್ಕೆ ಹಾಗೆ ಹೇಳಿರಬೇಕು' ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ಗೆ ಮೊದಲು ಶತ್ರು ಜೆಡಿಎಸ್, ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ನಡುವಿನ ಕಿತ್ತಾಟ ಬಿಜೆಪಿಗೆ ಸಹಕಾರಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ: ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಉಪಚುನಾವಣೆ: ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಅನಿವಾರ್ಯವಾಗಿ ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದವು. ಆದರೆ ಇನ್ನೆಂದೂ ಅಂತಹ ಕೆಲಸಕ್ಕೆ ಮುಂದಾಗುವುದಿಲ್ಲ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಮಾಹಿತಿ ನೀಡಿದರು.

English summary
Former chief minister Siddaramaiah said the high command would decide whether to forgo alliances with the JDS in the by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X