ಬೆಂಗಳೂರಿಗೆ ವಲಸೆ ಬಂದಿರುವ ಉತ್ತರ ಕರ್ನಾಟಕದವರಿಗೆ ಮನೆ ಹಂಚಿಕೆ ಮಾಡಿ: ಶಾಸಕ ಯತ್ನಾಳ್
ಬೆಂಗಳೂರು: ನಗರದ ಯಲಹಂಕ ಕೋಗಿಲು ಬಡಾವಣೆ ಬಳಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕದ ಸರ್ಕಾರಿ ಜಾಗದಲ್ಲಿ ನಡೆದಿದ್ದ ಒತ್ತುವರಿ ತೆರವು ವಿಚಾರ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತೀಚೆಗೆ ಸರ್ಕಾರಿ ಜಾಗದಲ್ಲಿನ 167ಕ್ಕೂ ಹೆಚ್ಚು ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆ ನಡೆದಿತ್ತು. ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಈಗ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೆ ಶಾಸಕ ಬಸನಗೌಡ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದರೆ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ವಲಸೆ ಬಂದಿರುವವರಿಗೆ ಮನೆ ಹಂಚಿಕೆ ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲು ತೀರ್ಮಾನಿಸಿದೆ. ಇದಕ್ಕೆ ಈಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಿಸಿದವರು ರಾಜ್ಯದ ವಸತಿ ಯೋಜನೆಗೆ ಅರ್ಹರೋ? ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ವಲಸೆ ಬಂದು ಕಷ್ಟಪಟ್ಟು ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ವಸತಿ ಯೋಜನೆಗೆ ಅರ್ಹರೋ? ಎಂದು ಶಾಸಕ ಯತ್ನಾಳ್ ಪ್ರಶ್ನಿಸಿದ್ದಾರೆ.

ಅಲ್ಪ ಸಂಖ್ಯಾತರ ಓಲೈಕೆಗೆ ಅಕ್ರಮ ಮನೆ ಹಂಚಿಕೆ
ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು, ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ, ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1ರಂದು ಹಸ್ತಾಂತರ ಮಾಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ. ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಕ್ಕೆ, ನಿಜಕ್ಕೂ ಕಾಳಜಿಯಿದ್ದಲ್ಲಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಗುಳೆ ಬಂದು, ಕೂಲಿ ಕಾರ್ಮಿಕರಾಗಿ ಹಲವು ದಶಕಗಳಿಂದ ಕೆಲಸ ಮಾಡುತ್ತಿರುವವರಿಗೆ ಮನೆಗಳನ್ನು ಹಂಚಿಕೆ ಮಾಡಬೇಕೆ ಹೊರತು ತೆರಿಗೆ ಕಟ್ಟದೆ, ಸರ್ಕಾರಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ವಾಸಿಸುತ್ತಿರುವವರಿಗಲ್ಲ ಎಂದು ಖಂಡಿಸಿದ್ದಾರೆ.
ಜೀವನ ಕಟ್ಟಿಕೊಳ್ಳಲು ಶ್ರಮ ಪಡುತ್ತಿರುವ ನಮ್ಮ ಉತ್ತರ ಕರ್ನಾಟಕದ ಕೂಲಿ ಕಾರ್ಮಿಕರಿಗೆ, ದಿನ ಗೂಲಿ ನೌಕರರಿಗೆ, ಹಲವು ವರ್ಷಗಳಿಂದ ಇಲ್ಲೇ ನೆಲೆಸಿ, ಸೂರಿಲ್ಲದವರಿಗೆ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿ ನೀಡಬೇಕೆ ಹೊರತು ಕಾನೂನನ್ನು ಉಲ್ಲಂಘಿಸಿ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದವರಿಗಲ್ಲ ಎಂದು ಯತ್ನಾಳ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವಿಗೆ ಸಂಬಂಧ ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡಲಿದ್ದೇವೆ. ಇದು ಈ ಒಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜನವರಿ 1ರಂದು ಹೊಸ ವರ್ಷದ ದಿನವೇ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡಲಿದ್ದೇವೆ. ಈ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೇವೆ. ಒಂದು ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲು ಎಂದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications