ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಲೋಕ್ ಕುಮಾರ್ ಈಗಲೂ ದಕ್ಷ ಅಧಿಕಾರಿಯೇ ಎಂದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26: ಅಲೋಕ್ ಕುಮಾರ್ ಈಗಲೂ ದಕ್ಷ ಅಧಿಕಾರಿಯೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಯಾರ ಮನೆ ಮೇಲಾದರೂ ದಾಳಿ ಮಾಡಿಕೊಳ್ಳಲಿ ನನ್ನು ಯಾಕೆ ಕೇಳ್ತೀರಾ, ನನಗೇನು ಸಂಬಂಧ, ಎಲ್ಲರ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಾರೆ ಎಂದರು.

 ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ದಾಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ.

Alok Kumar Is Still An Efficient Officer

ಅವರ ಮನೆ ಮೇಲೆ ದಾಳಿ ಮಾಡಿದರೆ ನಾನು ಏಕೆ ತಲೆ ಕೆಡಿಸಿಕೊಳ್ಳಲಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ, ನನ್ನ ತನಿಖೆಗೆ ಬೇಲಾದರೂ ಬರಲಿ ದೇಶದ ಕಾನೂನಿನಲ್ಲಿ ಯಾರ ಮೇಲೆ ಬೇಕಾದರೂ ವಿಚಾರಣೆಗೆ ಅವಕಾಶವಿದೆ.

ಅದಕ್ಕೆ ಏಕೆ ಗಾಬರಿ ಎಂದು ಪ್ರಶ್ನಿಸಿದರು.ಅಲೋಕ್ ಕುಮಾರ್ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಬಿಜೆಪಿಯ ಆಪರೇಷನ್ ಕಮಲ ಸೇರಿದಂತೆ ಇನ್ನಿತರ ವಿಚಾರಗಳಿಗಾಗಿ ರಾಜಕಾರಣಿಗಳು, ಪೊಲೀಸರು, ಮಠಾಧೀಶರು, ಖಾಸಗಿ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಮಾಡಲಾಗಿತ್ತು ಎಂಬ ಆರೋಪವಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಮಗ್ರ ತನಿಖೆ ಗಾಗಿ ಸಿಬಿಐ ಗೆ ವಹಿಸಿದೆ.

ಸಿಬಿಐ ದಾಳಿ ಮಾಡಿದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಯಾರುಸಿಬಿಐ ದಾಳಿ ಮಾಡಿದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಯಾರು

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದರು.

English summary
Former chief minister HD Kumaraswamy said Alok Kumar is still an efficient officer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X