ಬೆಂಗಳೂರಿನ ಹೊಸ ಪೊಲೀಸ್ ಆಯುಕ್ತ ಅಲೋಕ್ ಕುಮಾರ್

ಬೆಂಗಳೂರು, ಜೂನ್ 17: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 19 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ.

ಅಲೋಕ್ ಕುಮಾರ್ ಅವರು ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಟಿ ಸುನೀಲ್ ಕುಮಾರ್ ಅವರು ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ನಿರ್ದೇಶಕ(ಎಡಿಜಿಪಿ)ರಾಗಿ ನೇಮಕವಾಗಿದ್ದಾರೆ. ರವಿಕಾಂತೇಗೌಡ ಅವರು ಸಿಸಿಬಿ(ಕ್ರೈಂಬ್ರ್ಯಾಂಚ್) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಗೃಹ ಇಲಾಖೆ ಕಾರ್ಯದರ್ಶಿಯಾಗಿ ಬಿ.ಕೆ ಸಿಂಗ್ ನೇಮಕವಾಗಿದ್ದಾರೆ. ಸಿಐಡಿ ಎಸ್ಪಿಯಾಗಿ ರವಿ ಡಿ ಚನ್ನಣ್ಣನವರ್ ನೇಮಕವಾಗಿದ್ದಾರೆ.

Alok Kumar new Bengaluru City Police Commissioner

ಅಲೋಕ್ ಕುಮಾರ್ ಅವರು ಈ ಹಿಂದೆ ಭ್ರಷ್ಟಾಚಾರ ನಿಗ್ರಹದಳದ ಎಡಿಜಿಪಿ, ಸಿಸಿಬಿ ಕ್ರೈಂ ಬ್ರ್ಯಾಂಚ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ತರಬೇತಿ ವಿಭಾಗದ ಐಜಿಪಿಯಾಗಿದ್ದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರಿ ಸದ್ದು ಮಾಡಿದ ಒಂದಂಕಿ ಲಾಟರಿ ಪ್ರಕರಣದಲ್ಲಿ ಅಲೋಕ್ ಕುಮಾರ್ ಅವರ ಹೆಸರು ಕೇಳಿ ಬಂದಿದ್ದರಿಂದ ಅಮಾನತುಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+