ಬಂಧನ ಭೀತಿಯ ಬಗ್ಗೆ ಡಿಕೆ ಶಿವಕುಮಾರ್ ಏನು ಹೇಳಿದರು?

ಬೆಂಗಳೂರು, ಸೆಪ್ಟೆಂಬರ್ 08: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸೋಮವಾರ ಅಥವಾ ಮಂಗಳವಾರ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂಧನವಾಗುವ ಸಾಧ್ಯತೆ ಇದೆ.

ತಮ್ಮ ಬಂಧನದ ಸುದ್ದಿಯ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಇಡಿ ಇಲಾಖೆ ನನ್ನ ಮೇಲೆ ಎಫ್‌ಐಆರ್ ದಾಖಲಿಸಿರುವ ಬಗ್ಗೆ ನನಗೆ ಈವರೆಗೆ ಮಾಹಿತಿ ಇಲ್ಲ ಎಂದರು.

already facing some politically motivated case, face this one also: DK Shivakumar

ಈಗಾಗಲೇ ಕೇಂದ್ರವು ದುರುದ್ದೇಶಪೂರ್ವಕವಾಗಿ ನನ್ನ ಮೇಲೆ ಕೆಲವು ಕೇಸುಗಳನ್ನು ದಾಖಲಿಸಿದೆ. ಅದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ವ್ಯವಸ್ಥೆಗೆ ಗೌರವ ಕೊಟ್ಟು, ಆದಾಯ ತೆರಿಗೆ ಅಧಿಕಾರಿಗಳಿಗೆ ಗೌರವ ಕೊಟ್ಟು ಎಲ್ಲ ಪ್ರಕರಣಗಳನ್ನು ನ್ಯಾಯಯುತವಾಗಿಯೇ ಎದುರಿಸುತ್ತಿದ್ದೇನೆ. ಇಡಿ ಪ್ರಕರಣ ದಾಖಲಿಸಿದರೆ ಅದನ್ನೂ ಎದುರಿಸುತ್ತೇನೆ ಎಂದಿದ್ದಾರೆ.

ಯಡಿಯೂರಪ್ಪ ಅವರು ತಮ್ಮ ವಿರುದ್ಧ ಐಟಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಯಡಿಯೂರಪ್ಪ ಅವರಿಗೆ ಯಾರಾದರೂ ಸರಿಯಾಗಿ ಮಾರ್ಗದರ್ಶನ ಮಾಡಬೇಕು ಎಂದು ಮಾರ್ಮಿಕವಾಗಿ ನುಡಿದರು.

ಡಿ.ಕೆ.ಸುರೇಶ್ ಬಿಡುಗಡೆ ಮಾಡಿರುವ ಪತ್ರ ನಕಲಿ ಎಂದು ಯಡಿಯೂರಪ್ಪ ಅವರ ಹೇಳಿಕೆಗೂ ಮಾರ್ಮಿಕವಾಗಿಯೇ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, 'ಆ ಪತ್ರ ನಕಲಿ ಆಗಿದ್ದರೆ ಒಳ್ಳೆಯದು. ಹಣ್ಣು ಇದ್ದ ಮರಕ್ಕೆ ಕಲ್ಲು ಬೀಳುವುದು ಹೆಚ್ಚು ಹಾಗಾಗಿ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ' ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+