ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಐಡಿ ಕಾರ್ಡ್‌ಗಳನ್ನು ತೋರಿಸಿ ಮತದಾನ ಮಾಡಬಹುದು

|
Google Oneindia Kannada News

ಬೆಂಗಳೂರು, ಆಗಸ್ಟ್ 20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆ.22ರಂದು ನಡೆಯಲಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಹೊಸ ಪಟ್ಟಿ ಎಲ್ಲಾ ವಾರ್ಡ್ ಕಚೇರಿ ಮತ್ತು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಆ.10ರತನಕ ಪಟ್ಟಿಯನ್ನು ಪರಿಷ್ಕರಣೆ ಮಾಡಿ ಅಂತಿಮ ಪಟ್ಟಿ ಸಿದ್ಧಗೊಳಿಸಿ ಪಾಲಿಕೆಯ ಕಚೇರಿಗಳಿಗೆ ಕಳುಹಿಸಿಕೊಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯ ತಲಾ ಮೂರು ಪ್ರತಿಗಳು ಲಭ್ಯವಿದ್ದು, ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆಯೇ? ಎಂಬುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. [ಬಿಬಿಎಂಪಿ ವೆಬ್ ಸೈಟ್ ವಿಳಾಸ]

voting

ಹೊಸದಾಗಿ ನೋಂದಣಿ ಮಾಡಿಕೊಂಡವರಿಗೆ ಗುರುತಿನ ಚೀಟಿಯನ್ನು ವಿತರಣೆ ಮಾಡಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ ಆಯ್ದ 20 ಬಗೆಯ ಗುರುತಿನ ಚೀಟಿಯಲ್ಲಿ ಒಂದನ್ನು ಪ್ರದರ್ಶಿಸಿ ಮತದಾನ ಮಾಡಲು ಅವಕಾಶ ನೀಡಲಾಗಿದೆ. [ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಹೇಗೆ?]

ಗುರುತಿನ ಚೀಟಿಗಳು

* ಪಾಸ್‌ಪೋರ್ಟ್
* ಡ್ರೈವಿಂಗ್ ಲೈಸೆನ್ಸ್
* ಆದಾಯ ತೆರಿಗೆ ಗುರುತಿನ ಚೀಟಿ (PAN)
* ಭಾವಚಿತ್ರವಿರುವ ಗುರುತಿನ ಚೀಟಿ (ರೇಷನ್ ಕಾರ್ಡ್)
* ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್
* ಭಾವಚಿತ್ರವಿರುವ ಆರೋಗ್ಯವಿಮಾ ಯೋಜನೆ ಸ್ಮಾರ್ಟ್ ಕಾರ್ಡ್
* ಭಾವಚಿತ್ರವಿರುದ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ
* ಸಕ್ಷಮ ಪ್ರಾಧಿಕಾರ ನೀಡಿರುವ SC/ST/OBC ಭಾವಚಿತ್ರವಿರುವ ಗುರುತಿನ ಚೀಟಿ
* NREG ಯೋಜನೆಯಡಿ ನೀಡಿರುವ ಭಾವಚಿತ್ರವಿರುವ ಗುರುಚಿನ ಚೀಟಿ
* ಸಾರ್ವಜನಿಕ ವಲಯದ ಬ್ಯಾಂಕ್, ಅಂಚೆ ಕಚೇರಿ ನೀಡಿರುವ ಭಾವ ಚಿತ್ರವಿರುವ ಪಾಸ್ ಪುಸ್ತಕ
* ಮಾನ್ಯತೆ ಪಡೆದ ನೋಂದಾಯಿತ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಗುರುಚಿತ ಚೀಟಿ
* ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ
* ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಗುರುತಿನ ಚೀಟಿ
* ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ
* ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ
* ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿ

English summary
BBMP elections 2015 : Those who have misplaced their EPIC/Voter ID card or have not yet gotten it can use other identity cards as proof of Indian citizenship to cast their vote. But you should have your name on voters list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X