Ambaari Double Decker: ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದ ಡಬಲ್ ಡೆಕ್ಕರ್ ಬಸ್; ಸಂಚರಿಸುವ ಮಾರ್ಗ, ದರ ವಿವರ
ಬೆಂಗಳೂರು: 1970 ಮತ್ತು 80ರ ದಶಕದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಸದ್ದು ಮಾಡಿದ್ದ ಡಬಲ್ ಡೆಕ್ಕರ್ ಬಸ್‌ಗಳು ಸಾಮಾನ್ಯ ಸಾರಿಗೆಯ ಭಾಗವಾಗಿದ್ದವು. ಆದರೆ ಕಾರಣಾಂತರಗಳಿಂದ ಈ ಬಸ್‌ಗಳ ಸಂಚಾರ ನಿಲ್ಲಿಸಲಾಯಿತು. ಸಾರ್ವಜನಿಕರು ಬೆಂಗಳೂರಿನಲ್ಲಿ ಮತ್ತೆ ಈ ಡಬಲ್ ಡೆಕ್ಕರ್ ಬಸ್‌ಗಳಲ್ಲಿ ಪ್ರಯಾಣಿಸುವ ಆಸೆ ಬಿಚ್ಚಿಟ್ಟಿದ್ದರು. ಈ ಆಸೆ ಕೊನೆಗೂ ಈಡೇರಿದ್ದು, ನಗರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆಎಸ್‌ಟಿಡಿಸಿ) ಅಂಬಾರಿ ಡಬಲ್ ಡೆಕ್ಕರ್ ಬಸ್‌ಗಳನ್ನು ರಸ್ತೆಗಿಳಿಸಿದೆ.
ಪ್ರವಾಸಿಗರಿಗೆ ಹೊಸ ಅನುಭವ ನೀಡುವ ಉದ್ದೇಶದಿಂದ ಲಂಡನ್ ಮಾದರಿಯ 'ಅಂಬಾರಿ' ಡಬಲ್ ಡೆಕ್ಕರ್ ಬಸ್ ಸೇವೆ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವತಿಯಿಂದ ಪರಿಚಯಿಸಲಾದ ಈ ವಿಶೇಷ ಬಸ್ ಸೇವೆಗೆ ರಾಜ್ಯದ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ ನೀಡಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಮೂರು ಡಬಲ್ ಡೆಕ್ಕರ್ ಬಸ್‌ಗಳಿಗೆ ಚಾಲನೆ ನೀಡಿದರು. ಈ ಬಸ್‌ಗಳು ಇಂದಿನಿಂದಲೇ ಬೆಂಗಳೂರಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರಿಗೆ ಸೇವೆ ನೀಡಲಿವೆ.
ಈ ಹಿಂದೆ ಮೈಸೂರು ದಸರಾ ಸಂದರ್ಭದಲ್ಲಿ ಇದೇ ಮಾದರಿಯ ಡಬಲ್ ಡೆಕ್ಕರ್ ಬಸ್‌ಗಳು ಭಾರೀ ಜನಪ್ರಿಯತೆ ಪಡೆದಿದ್ದವು. ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಹಿನ್ನೆಲೆ ಈ ಸೇವೆಯನ್ನು ರಾಜಧಾನಿ ಬೆಂಗಳೂರಿಗೂ ವಿಸ್ತರಿಸಲಾಗಿದೆ. ನಗರದಲ್ಲಿನ ಪ್ರಮುಖ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು ಹಾಗೂ ಸಾಂಸ್ಕೃತಿಕ ಕೇಂದ್ರಗಳನ್ನು ಒಟ್ಟಾಗಿ ವೀಕ್ಷಿಸಲು ಈ ಬಸ್ ಸೇವೆ ಪ್ರಮುಖ ಸಾರಿಗೆಯಾಗಿ ಸೇವೆ ನೀಡಲಿದೆ.
ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, "ಬೆಂಗಳೂರು ಪ್ರವಾಸೋದ್ಯಮವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಡಬಲ್ ಡೆಕ್ಕರ್ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಇದರಿಂದ ಪ್ರವಾಸಿಗರಿಗೆ ಸುಲಭ, ಸುರಕ್ಷಿತ ಹಾಗೂ ವಿಭಿನ್ನ ಅನುಭವ ದೊರೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿಕ್ರಿಯೆ ಆಧರಿಸಿ ಇನ್ನಷ್ಟು ಬಸ್‌ಗಳನ್ನು ಸೇರಿಸುವ ಯೋಜನೆಯೂ ಇದೆ" ಎಂದು ಹೇಳಿದರು.

ಬಸ್‌ನ ವಿಶೇಷತೆ
ಎರಡು ಮಹಡಿಗಳಿರುವ ಈ ಬಸ್‌ಗಳಲ್ಲಿ ಮೇಲ್ಭಾಗದಿಂದ ನಗರದ ಸೌಂದರ್ಯವನ್ನು ವೀಕ್ಷಿಸುವ ಅವಕಾಶ ಪ್ರವಾಸಿಗರಿಗೆ ಸಿಗಲಿದೆ. ಆರಾಮದಾಯಕ ಆಸನ ವ್ಯವಸ್ಥೆ, ಸುರಕ್ಷತಾ ಸೌಲಭ್ಯಗಳು ಹಾಗೂ ಪ್ರವಾಸಿಗರಿಗೆ ಮಾಹಿತಿ ನೀಡುವ ವ್ಯವಸ್ಥೆ ಈ ಬಸ್‌ಗಳಲ್ಲಿ ಅಳವಡಿಸಲಾಗಿದೆ. ಲಂಡನ್ ಮಾದರಿಯ 'ಅಂಬಾರಿ' ಡಬಲ್ ಡೆಕ್ಕರ್ ಬಸ್ ಸೇವೆ ಆರಂಭದಿಂದ ಬೆಂಗಳೂರು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ಸಿಕ್ಕಿದ್ದು, ನಗರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದೆ.
Discover Bengaluru the easy, hassle-free way with the Ambaari Double Decker Hop on, hop off, and enjoy iconic landmarks from an elevated view starting at Ravindra Kala Kshetra.
— K.S.T.D.C. (@kstdc) January 20, 2026
+91 80 4334 4334https://t.co/upMzETigck#kstdcambaari #DoubleDecker #Bengaluru #HopOnHopOff pic.twitter.com/NcnoQLWYhM
ಟಿಕೆಟ್ ದರ, ಸಮಯ?
ಬೆಳಿಗ್ಗೆ 10.30ರಿಂದ ರಾತ್ರಿ 8 ಗಂಟೆಯವರೆಗೆ ಈ ಬಸ್ ಸೇವೆ ನೀಡಲಿವೆ. ಒಬ್ಬರಿಗೆ ಟಿಕೆಟ್ ದರ 180 ರೂಪಾಯಿ. ರವೀಂದ್ರ ಕಲಾಕ್ಷೇತ್ರದಿಂದ ಶುರುವಾಗಿ-ಹಡ್ಸನ್ ಸರ್ಕಲ್, ವಿಶ್ವೇಶ್ವರಯ್ಯ ಮ್ಯೂಸಿಯಂ, ಕ್ವೀನ್ಸ್ ರೋಡ್, ವಿಧಾನಸೌಧ, ಕೆ.ಆರ್.ಸರ್ಕಲ್ ಮೂಲಕ ಮತ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರವಾಸ ಮುಗಿಯಲಿದೆ. ಟಿಕೆಟ್ ಬುಕಿಂಗ್ ಹಾಗೂ ಹೆಚ್ಚಿನ ವಿವರಗಳಿಗೆ ಕೆಎಸ್‌ಟಿಡಿಸಿ ವೆಬ್‌ಸೈಟ್ https://kstdc.co/activities/hop-on-hop-off-service/ ಅನ್ನು ಸಂಪರ್ಕಿಸುವಂತೆ ತಿಳಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್‌ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications