ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್-ಜೆಡಿಸ್ ಮೈತ್ರಿ ಸರ್ಕಾರ ಉರುಳಲು ಕಾರಣ ಸಿದ್ಧೌಷಧವೇ?

|
Google Oneindia Kannada News

ಬೆಂಗಳೂರು, ಜುಲೈ.22: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಡುವೆ ಪತನಗೊಂಡ ಸಮ್ಮಿಶ್ರ ಸರ್ಕಾರದ ವಿಚಾರ ಚರ್ಚೆ ಆಗುತ್ತಿದೆ. ಜುಲೈ.23ಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವು ಪತನಗೊಂಡು ಸರಿಯಾಗಿ ಒಂದು ವರ್ಷ ಕಳೆಯುತ್ತದೆ.

Recommended Video

ಸಿನಿಮಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರ | Oneindia Kannada

ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ರಚಿಸಲ್ಪಟ್ಟ ಸರ್ಕಾರದ ಪತನಕ್ಕೆ ಆಪರೇಷನ್ ಕಮಲದ ಜೊತೆಗೆ ಸಿದ್ಧೌಷಧವೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿದ್ದ ಒಂದು ವರ್ಗವು ತಮ್ಮ ಸರ್ಕಾರ ಉರುಳುವುದಕ್ಕೆ ಕಾರಣ ಎಂದು ದೂಷಿಸಿದ್ದಾರೆ.

ಯಕಶ್ಚಿತ್ 'ಕುಮಾರಸ್ವಾಮಿ'ಯನ್ನು 'ಕುಮಾರಣ್ಣ'ನನ್ನಾಗಿಸಿದ್ದು ನಿಮ್ಮ ಪ್ರೀತಿಯಕಶ್ಚಿತ್ 'ಕುಮಾರಸ್ವಾಮಿ'ಯನ್ನು 'ಕುಮಾರಣ್ಣ'ನನ್ನಾಗಿಸಿದ್ದು ನಿಮ್ಮ ಪ್ರೀತಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈತ್ರಿ ಸರ್ಕಾರದ ವಿಚಾರವನ್ನು ಹೆಚ್ ಡಿಕೆ ಈಗೇಕೆ ಪ್ರಸ್ತಾಪಿಸುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿದ್ಧೌಷಧ ಕಾರಣ ಎಂಬ ಅವರ ಮಾತಿನ ತಾತ್ಪರ್ಯ ನಮಗೆ ಅರ್ಥವಾಗುವುದಿಲ್ಲ ಎಂದಿದ್ದಾರೆ.

Amid Coronavirus Pandemic Is It Necesary To Discuss About Alliance Government Collapse Matter?


ಕುಮಾರಸ್ವಾಮಿ ಹೇಳಿಕೆಗೇಕೆ ತಿರುಗೇಟು?:

ರಾಜ್ಯದಲ್ಲಿ 14 ತಿಂಗಳು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಸರ್ಕಾರ ರಚಿಸಿದ್ದು ಆಗಿದೆ. ಮೈತ್ರಿ ಸರ್ಕಾರ ಪತನಗೊಂಡಿದ್ದೂ ಆಗಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಏರಿಕೆಯಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಹಳೆಯದರ ಬಗ್ಗೆ ಕೆದಕುವುದಕ್ಕೆ ನನಗೆ ಇಷ್ಟವಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರ ಹೇಳಿಕೆಗೆಲ್ಲ ನಾನು ಪ್ರತಿಕ್ರಿಯೆ ನೀಡುವುದಕ್ಕೆ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

English summary
Amid Coronavirus Pandemic Is It Necesary To Discuss About Alliance Government Collapse Matter?. Siddaramaiah Questioned H D Kumarswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X