ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಪಿಡುಗಿನ ನಡುವೆಯೂ ಪ್ರಚಾರಕ್ಕಷ್ಟೇ ಪ್ರಧಾನಿಯ ಆದ್ಯತೆ: ಖರ್ಗೆ

|
Google Oneindia Kannada News

ಬೆಂಗಳೂರು, ಮೇ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಡುವೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇವಲ ಪ್ರಚಾರಕ್ಕಾಗಿಯೇ ಹೆಚ್ಚು ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೊವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲೇ ಕುಂಭ ಮೇಳ ನಡೆಸುವುದಕ್ಕೆ ಅವಕಾಶ ನೀಡಿದರು. ಅನೇಕ ಸಭೆ ಮತ್ತು ಸಮಾರಂಭಗಳನ್ನು ನಡೆಸಿದರು. ಆಮೂಲಕ ಸಾವಿರಾರು ಸಂಖ್ಯೆಯಲ್ಲಿ ಜನರು ಒಂದೇ ಸ್ಥಳದಲ್ಲಿ ಒಟ್ಟುಗೂಡುವಂತೆ ಮಾಡಿದರು ಎಂದಿ ಕಿಡಿ ಕಾರಿದರು.

'ಭಾರತದ ಕೋವಿಡ್‌ ಸಾವು ಅಧಿಕೃತ ಮಾಹಿತಿಗಿಂತ 14 ಪಟ್ಟು ಹೆಚ್ಚಿದೆ' - ಎನ್‌ವೈಟಿ ವರದಿ'ಭಾರತದ ಕೋವಿಡ್‌ ಸಾವು ಅಧಿಕೃತ ಮಾಹಿತಿಗಿಂತ 14 ಪಟ್ಟು ಹೆಚ್ಚಿದೆ' - ಎನ್‌ವೈಟಿ ವರದಿ

ಕೊರೊನಾವೈರಸ್ ಸಮಯದಲ್ಲಿ ಜನರಿಗೆ ಅನ್ನದಾನ ನೀಡುವ ಕೆಲಸ ಮಾಡುತ್ತಿಲ್ಲ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆ ಕೊಡಿಸುವ ಕೆಲಸ ಆಗುತ್ತಿಲ್ಲ, ಕೊವಿಡ್-19 ಸೋಂಕಿತರಿಗೆ ಆಕ್ಸಿಜನ್ ಕೊಡಿಸುವುದನ್ನು ನೋಡಿಲ್ಲ. ಇದೇ ಬೇರೆ ಸಂದರ್ಭಗಳಲ್ಲಿ ಆಗಿದ್ದರೆ ಪತ್ರಿಕೆಗಳ ತುಂಬ ಅದೇ ಸುದ್ದಿಯಾಗಿರುತ್ತಿತ್ತು ಎನ್ನುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪರೋಕ್ಷ ವಾಗ್ದಾಳಿ ನಡೆಸಿದರು.

 Amid Coronavirus Pandemic, PM Modi Only Gives Importance To Publicity; Mallikarjun Kharge

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ಕಳೆದ 24 ಗಂಟೆಗಳಲ್ಲಿ2,22,315 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,02,544 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,454 ಮಂದಿ ಪ್ರಾಣ ಬಿಟ್ಟಿದ್ದಾರೆ.

Recommended Video

ಜವಾಬ್ಧಾರಿ ಸ್ಥಾನದಲ್ಲಿ ಇದ್ದೀನಿ !! ಇದಕ್ಕೆಲ್ಲಾ I DON'T CARE!! | C T Ravi | Oneindia Kannada

ಭಾರತದಲ್ಲಿ ಒಟ್ಟು 2,67,52,447 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,37,28,011 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,03,720 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 27,20,716 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Amid Coronavirus Pandemic, PM Modi Only Gives Importance To Publicity; Mallikarjun Kharge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X