ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯೇಂದ್ರ ಟಿಕೆಟ್ ತಪ್ಪಿಸಿದ್ದು ನಾನೇ: ಅಮಿತ್ ಶಾ

By Manjunatha
|
Google Oneindia Kannada News

Recommended Video

ಬಿ ವೈ ವಿಜಯೇಂದ್ರಗೆ ಟಿಕೆಟ್ ತಪ್ಪಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಕಾರಣ | Oneindia Kannada

ಬೆಂಗಳೂರು, ಏಪ್ರಿಲ್ 30: ವರುಣಾ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ಮಗ ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿದ್ದು ತಾವೇ ಎಂದು ಅಮಿತ್ ಶಾ ಹೇಳಿದ್ದಾರೆ.

ಭಾನುವಾರ ರಾತ್ರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾದಲ್ಲಿ ಕಾರ್ಯಕರ್ತರೊಬ್ಬರಿಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ, ಅಲ್ಲಿ ನಾನೇ ಬಿಜೆಪಿ ಪರ ಪ್ರಚಾರ ಮಾಡುತ್ತೇವೆ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯೇಂದ್ರ ಕೈತಪ್ಪಿದ ಟಿಕೆಟ್: ಅನಂತ ಕುಮಾರ್ ಮೈಸೂರು ಪ್ರವಾಸ ರದ್ದು! ವಿಜಯೇಂದ್ರ ಕೈತಪ್ಪಿದ ಟಿಕೆಟ್: ಅನಂತ ಕುಮಾರ್ ಮೈಸೂರು ಪ್ರವಾಸ ರದ್ದು!

ವಿಜಯೇಂದ್ರಗೆ ಟಿಕೆಟ್ ತಪ್ಪಿದ್ದಕ್ಕೆ ಅವರ ಬೆಂಬಲಿಗರು ದಾಂಧಲೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವ ಅನಂತ್‌ಕುಮಾರ್‌, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಶ್‌ ಜಿ ಅವರೇ ಟಿಕೆಟ್ ತಪ್ಪಲು ಕಾರಣ ಎಂದು ಅವರಿಬ್ಬರ ವಿರುದ್ಧ ಆಕ್ರೋಶವೂ ವ್ಯಕ್ತವಾಗಿತ್ತು.

In Pics:ದಾವಣಗೆರೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

Amit Shah admits that he only rejected Vijayendra ticket from Varuna

ಆದರೆ ಈಗ ಅದಕ್ಕೆ ತೆರೆ ಬಿದ್ದಿದ್ದು, ವಿಜಯೇಂದ್ರಗೆ ಟಿಕೆಟ್‌ ನೀಡದಿರುವ ನಿರ್ಧಾರ ತಮ್ಮದೇ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಅಮಿತ್ ಶಾ ಅವರು ಈ ನಿರ್ಧಾರ ಕೈಗೊಳ್ಳುವ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ಅವರು ತುಟಿ ಬಿಚ್ಚಿಲ್ಲ. ಯಡಿಯೂರಪ್ಪ ಸರ್ಕಾರ ರಚಿಸುವುದು ಖಚಿತ ಎಂದು ಅವರು ಭರವಸೆಯನ್ನೂ ಇದೇ ಸಮಯದಲ್ಲಿ ವ್ಯಕ್ತಪಡಿಸಿದ್ದಾರೆ.

ವರುಣಾದಲ್ಲಿ ವಿಜಯೇಂದ್ರ ಬೆಂಬಲಿಗರ ಮಾಸ್ಟರ್‌ ಪ್ಲಾನ್‌ ವರುಣಾದಲ್ಲಿ ವಿಜಯೇಂದ್ರ ಬೆಂಬಲಿಗರ ಮಾಸ್ಟರ್‌ ಪ್ಲಾನ್‌

ವಿಜಯೇಂದ್ರಗೆ ಟಿಕೆಟ್ ಸಿಗದೇ ಇದ್ದುದ್ದಕ್ಕೆ ಬೇಸರಗೊಂಡಿರುವ ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಚುನಾವಣೆಯಲ್ಲಿ ಬಿಜೆಪಿ ಬದಲಿಗೆ ನೋಟಾಕ್ಕೆ ಮತ ಹಾಕುವಂತೆ ಅಭಿಯಾನ ನಡೆಸುತ್ತಿದ್ದಾರೆ. ವರುಣಾದಿಂದ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕಣಕ್ಕಿಳಿದಿದ್ದು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

English summary
BJP national president Amit Shah says 'not giving Varuna ticket to Vijayendra is my decision. we gave ticket to a party worker and I only campaign for him'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X