ಬೆಂಗಳೂರಿಗೆ ಬಂದಿದ್ದಾರೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಬೆಂಗಳೂರು, ಜ.3 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ರಾತ್ರಿ ಅವರು ನಗರಕ್ಕೆ ಆಗಮಿಸಿದ್ದು, ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರಮುಖರು ಅಮಿತ್ ಶಾ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಕುಮಾರ ಕೃಪಾ ಅತಿಥಿ ಗೃಹದಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಲಿದ್ದಾರೆ. [ಜ.3ಕ್ಕೆ ಬೆಂಗಳೂರಿಗೆ ಬರ್ತಾರೆ ಅಮಿತ್ ಶಾ]

Amit Shah

ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಘಟಕದ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ನಂತರ ಪಕ್ಷದ ಶಾಸಕರು ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನದ ನಂತರ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. [ಬೆಂಗಳೂರಿನಲ್ಲಿ ಅಮಿತ್ ಶಾ ಹೇಳಿದ್ದೇನು?]

ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿಗೆ ಇದೇ ಮೊದಲ ಬಾರಿಗೆ ಆಗಮಿಸಿದ್ದಾರೆ. ಅಮಿತ್ ಶಾ ಭೇಟಿಯ ಹಿನ್ನಲೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+