Amit Shah: ರಾಜ್ಯಕ್ಕೆ ಚಾಣಕ್ಯನ ಆಗಮನ: ಇಂದು ಜೆಡಿಎಸ್ ಜತೆ ಸಭೆ, ಬೃಹತ್ ಸಮಾವೇಶ, ವೇಳಾಪಟ್ಟಿ ವಿವರ
ಬೆಂಗಳೂರು, ಏಪ್ರಿಲ್ 02: ಕರ್ನಾಟಕ ಲೋಕಸಭಾ ಚುನಾವಣೆ ಕಣಕ್ಕೆ ದೆಹಲಿ ನಾಯಕರ ಆಗಮನವಾಗುತ್ತಿದೆ. ಆಯಾ ಪಕ್ಷದ ವರಿಷ್ಠರು ಆಗಮಿಸಿ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಇದೇ ಕಾರ್ಯಕ್ಕಾಗಿ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅವರು ವಿವಿಧ ಪ್ರಚಾರ ಕಾರ್ಯ, ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆ ಆದ ಬಳಿಕ ಅಮಿತ್ ಶಾ ಅವರ ಮೊದಲ ಕರ್ನಾಟಕ ಭೇಟಿ ಇದಾಗಿದೆ. ಇಂದು ಬೆಳಗ್ಗೆ ಅವರು ತಾವು ವಾಸ್ತವ್ಯ ಹೂಡಿರುವ ತಾಜ್ ವೆಸ್ಟೆಂಟ್‌ನಲ್ಲಿಯೇ ಮೈತ್ರಿ ಪಕ್ಷ ಜೆಡಿಎಸ್-ಬಿಜೆಪಿ ಸಮನ್ವಯ ಸಭೆ ನಡೆಸಲಿದ್ದಾರೆ.

ಹೊಂದಾಣಿಕೆ ಮುಂದುವರಿಕೆಗೆ ಶಾ ಸಲಹೆ
ಸಭೆಯಲ್ಲಿ ಎರಡು ಪಕ್ಷಗಳ ಮಧ್ಯೆದ ಹೊಂದಾಣಿಕೆ, ಸಹಕಾರ ಹೀಗೆ ಮುಂದುವರೆಸುವ ಕುರಿತು ಅವರು ತಮ್ಮ ನಾಯಕರಿಗೆ ಒಂದಷ್ಟು ಸಲಹೆ ಸೂಚನೆಗಳನ್ನು ಕೊಡಲಿದ್ದಾರೆ. ಮೈತ್ರಿ ಪಕ್ಷಗಳು ಸೇರಿ ಎದುರಾಳಿ ಕಾಂಗ್ರೆಸ್ ಸೋಲಿಸುವ ತಂತ್ರಗಾರಿಕೆ, ಹೆಚ್ಚು ಸ್ಥಾನ ಪಡೆಯಲು ಬೇಕಾದ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ.
ಇಂದು ಬೃಹತ್ ಸಮಾವೇಶದಲ್ಲಿ ಶಾ ಭಾಗಿ
ಸಭೆಯ ನಂತರ ಬೆಳಗ್ಗೆ 11 ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಬೆಂಗಳೂರು ಸುತ್ತಮುತ್ತಲಿನ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಪಕ್ಷ ಗೆಲ್ಲಿಸಲು, ಸಂಘಿಟಿತರಾಗಿ ಶ್ರಮಿಸುವಂತೆ ಅವರು ಕರೆ ನೀಡಲಿದ್ದಾರೆ.

ಬಂಡಾಯ ಶಮನಕ್ಕೆ ಅಮಿತ್ ಶಾ ಯತ್ನ
ಇನ್ನೂ ಟಿಕೆಟ್ ಹಂಚಿಕೆ ಬಳಿಕ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ ಎದುರಿಸಿದೆ. ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಅಂತಹ ನಾಯಕ ಬಂಡಾಯವನ್ನು ಶಮನ ಮಾಡಲು ಅಮಿತ್ ಪ್ರಯತ್ನಿಸಲಿದ್ದಾರೆ. ಒಟ್ಟಾಗಿ ಚುನಾವಣೆ ಎದುರಿಸಬೇಕು. ತಮ್ಮ ಕ್ಷೇತ್ರದಲ್ಲಿ ಪಕ್ಷ ಯಾರೇ ಅಭ್ಯರ್ಥಿಯನ್ನಾಗಿ ಮಾಡಿದ್ದರು, ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ತಿಳಿ ಹೇಳಲಿದ್ದಾರೆ.
ಇದೇ ವೇಳೆ ಗೃಹ ಸಚಿವರು, ಬೆಂಗಳೂರು ಸೇರಿದಂತೆ ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಬೀದರ್, ಬೆಳಗಾವಿ ಲೋಕಸಭಾ ಕ್ಷೇತ್ರಗಳ ಮುಖಂಡರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಬೆಂ.ಗ್ರಾಮಾಂತರದಲ್ಲಿ ಮತಯಾಚನೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಮೊದಲ ಬಾರಿ ಸ್ಪರ್ಧಿಸುವ ಮೂಲಕ ರಾಜಕೀಯ ಪ್ರವೇಶಿಸಿರುವ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ನಡೆಸಲಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತದಾರರಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ಬಿಜೆಪಿಯು ಅಮಿತ್ ಶಾ ಅವರ ರಾಜ್ಯ ಭೇಟಿ ಪಟ್ಟಿಯಲ್ಲಿ ಮಾಹಿತಿ ನೀಡಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications