ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಸುಳ್ಳು ಹೇಳೋಕೆ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ಜನವರಿ 18: ಅಮಿತ್ ಶಾ ರಾಜ್ಯಕ್ಕೆ ಬಂದಿರುವುದೇ ಸುಳ್ಳು ಹೇಳುವುದಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಎಎ ಪರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಹುಬ್ಬಳ್ಳಿಗೆ ಭೇಟಿ ನೀಡುವ ಅಮಿತ್ ಶಾ ಅವರು ಮಹದಾಯಿ ವಿವಾದದ ಬಗ್ಗೆ ಸ್ಪಷ್ಟನೆ ನೀಡಲಿ.

ಅವರು ಕೊಟ್ಟಿರುವ ನೆರೆ ಪರಿಹಾರ ಸಾಕಾಗಲ್ಲ. ಅದರ ಬಗ್ಗೆಯೂ ಮಾತನಾಡಲಿ. ಅಮೇಲೆ ಸಿಎಎ ಬಗ್ಗೆ ಮಾತನಾಡಲಿ ಎಂದು ಕುಟುಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರನ್ನ ಬಿಟ್ಟು ಹೇಗೆ ಸಂಪುಟ ವಿಸ್ತರಣೆ ಮಾಡ್ತಾರೆ. ನನ್ನ ಅವಧಿಯಲ್ಲಿ ಹೀಗೆ ಇರಲಿಲ್ಲ. ನಾವು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಿದ್ದವು ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.
ಹಾಗೆಯೇ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಗೆ ಅಮಿತ್ ಶಾ ಅವಕಾಶ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ವಿಮಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹೋಗಲ್ಲ ಅಂದ ಮೇಲೆ ಹೇಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತದೆ.












Click it and Unblock the Notifications