ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಬೆಂಗಳೂರು ಕಚೇರಿ ಮೇಲೆ ಇಡಿ ದಾಳಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25: ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ವಿರುದ್ಧ ಇರುವ ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದ ವಿಚಾರವಾಗಿ ಜಾರಿ ನಿರ್ದೇಶನಾಲಯವು (ಇಡಿ) ಗುರುವಾರದಂದು ಬೆಂಗಳೂರು ಸೇರಿದಂತೆ ಎರಡು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಫೆಮಾ ಅಡಿಯಲ್ಲಿ ಶೋಧ ನಡೆಸಲಾಗಿದೆ. ದಾಖಲೆಗಳಿಗಾಗಿ ಈ ಕಾರ್ಯಾಚರಣೆ ನಡೆದಿದೆ. ಅಮ್ನೆಸ್ಟಿ ಇಂಟರ್ ನ್ಯಾಷನಲ್ ಗೆ ಬಂದಿರುವ ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪ ಇದೆ ಎಂದು ಜಾರಿ ನಿರ್ದೇಶನಾಲಯದಿಂದ ತಿಳಿಸಲಾಗಿದೆ.

ಪರಿಸರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಸರಕಾರೇತರ ಸಂಸ್ಥೆ ಗ್ರೀನ್ ಪೀಸ್ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸಂಸ್ಥೆಗಳ ಹನ್ನೆರಡಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯವು ಕೆಲ ಸಮಯದ ಹಿಂದೆ ಸ್ಥಗಿತಗೊಳಿಸಿತ್ತು. ಬೆಂಗಳೂರಿನಲ್ಲಿನ ಸಂಸ್ಥೆಯ ಆವರಣದಲ್ಲಿ ಈ ಆರೋಪಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

 Amnesty International’s Bengaluru offices raided by Enforcement Directorate

36 ಕೋಟಿ ರುಪಾಯಿಗೂ ಹೆಚ್ಚು ಮೊತ್ತ ಇದರಲ್ಲಿ ಒಳಗೊಂಡಿದ್ದು, ಮೇ 2014 ಮತ್ತು ಆಗಸ್ಟ್ 2016ರ ಮಧ್ಯೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಹಣವನ್ನು ಸ್ವೀಕರಿಸಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

English summary
The Enforcement Directorate (ED) Thursday conducted searches at two locations here in connection with a foreign exchange contravention case against human rights watchdog Amnesty International India, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X