ಬೀದಿ ನಾಯಿ ಜಗಳಕ್ಕೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಅಮಾನತು !
ಬೆಂಗಳೂರು, ಡಿ. 23: ಬೀದಿ ನಾಯಿ ಜಗಳದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸೇವೆಯಿಂದ ವಜಾ ಆಗಿದ್ದಾರೆ. ಬೀದಿ ನಾಯಿಗಳಿಗೆ ಅನ್ನ ಹಾಕುವುದನ್ನು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಮೃತಹಳ್ಳಿ ಪೊಲೀಸ್ ಠಾಣೆ ಎಎಸ್ಐ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.
ಏನಿದು ಘಟನೆ: ಯಲಹಂಕ ನ್ಯೂಟೌನ್ ಪೊಲೀಸ್ ಕ್ವಾಟ್ರಸ್‌ನಲ್ಲಿರುವ ಬಿ.ಎಚ್. ಚಂದ್ರಶೇಖರ್ ಯಲಹಂಕ ನ್ಯೂ ಟೌನ್ ಸಮೀಪ ನಿಂತಿದ್ದರು. ಈ ವೇಳೆ ಮಹಿಳೆಯೊಬ್ಬಳು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಬೀದಿ ನಾಯಿಗಳಿಗೆ ಊಟ ಹಾಕುವುದನ್ನು ಪ್ರಶ್ನಿಸಿದ ಚಂದ್ರಶೇಖರ್ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಗಮನಿಸಿದ ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ದೂರನ್ನಾಧರಿಸಿ ಮುಖ್ಯ ಪೇದೆ ವಿರುದ್ಧ ಬೆದರಿಕೆ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮಹಿಳೆ ನೀಡಿರುವ ದೂರಿನ ಪ್ರಕಾರ, ಆಕೆ ಮನೆಯಿಂದ ಹೊರ ಬಂದು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಸಮೀಪದಲ್ಲಿ ಚಂದ್ರಶೇಖರ್ ನಿಂತಿದ್ದರು. ರಾತ್ರಿಯಾಗಿದ್ದ ರಿಂದ ಮೊಬೈಲ್ ಟಾರ್ಚ್ ಹಾಕಿ ಆ ವ್ಯಕ್ತಿ ಮಹಿಳೆಯ ದೇಹದ ಮೇಲೆ ಬಿಟ್ಟಿದ್ದಾನೆ. ಅಲ್ಲದೇ ಬೀದಿ ನಾಯಿಗಳಿಗೆ ಊಟ ಹಾಕುವುದರ ಬಗ್ಗೆ ಚಂದ್ರಶೇಖರ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾನು ಪೊಲೀಸ್ ಆಗಿದ್ದು, ನನ್ನನ್ನು ನೀನು ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.
ಇದೇ ವೇಳೆ ಸಮೀಪ ಬಂದ ವ್ಯಕ್ತಿಗೆ ಪೊಲೀಸ್ ವರ್ತನೆ ರೆಕಾರ್ಡ್ ಮಾಡಿಕೊಳ್ಳುವಂತೆ ಮಹಿಳೆ ಸೂಚಿಸಿದ್ದು, ಅದರಂತೆ ರೆಕಾರ್ಡ್ ಮಾಡಿಕೊಂಡಿದ್ದಾಗಿ ವಿವರಿಸಲಾಗಿದೆ. ವಿಡಿಯೋ ಮಾಡಿಕೊಂಡ ಬಳಿಕ ಅದನ್ನು ಡಿಲೀಟ್ ಮಡುವಂತೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಪರಿ ಪರಿ ಬೇಡಿಕೊಂಡಿದ್ದಾರೆ.
ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹಾಕಿ ಘಟನೆ ಬಗ್ಗೆ ವಿವರಿಸಿದ್ದು, ಇದು ವೈರಲ್ ಆಗುತ್ತಿದ್ದಂತೆ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತು ಮಾಡಿ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ. ನಾಯಿಗಳಿಗೆ ಊಟ ಹಾಕಿದ್ದನ್ನು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಚಾರದಲ್ಲಿ ಪೊಲೀಸ್ ಅಮಾನತಿಗೆ ಒಳಗಾಗಿದ್ದಾರೆ.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications