ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತನ್ನ ಉಳಿತಾಯದ ಹಣವನ್ನು ಕೊರೊನಾ ಪರಿಹಾರಕ್ಕೆ ನೀಡಿದ ವಿದ್ಯಾರ್ಥಿನಿ

|
Google Oneindia Kannada News

ಬೆಂಗಳೂರು, ಮಾರ್ಚ್ 23: ತಾನು ಉಳಿತಾಯ ಮಾಡಿದ ಹಣವನ್ನು ಕೊರೊನಾ ವೈರಸ್ ತಡೆಗೆ ಬಳಸಿಕೊಳ್ಳುವಂತೆ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬರು ಸರ್ಕಾರಕ್ಕೆ ನೀಡಿದ್ದಾರೆ. ವಿದ್ಯಾರ್ಥಿನಿಯ ಈ ಕೆಲಸ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.

ಅಮೂಲ್ಯ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾದಿಂದ ರಾಜ್ಯದಲ್ಲಿ ಆಗುತ್ತಿರುವ ಪರಿಸ್ಥಿತಿಯನ್ನು ಗಮನಿಸಿದ ಅಮೂಲ್ಯ ತನ್ನ ಕೈಲಾದ ನೆರವು ನೀಡಬೇಕು ಎಂದು ಮುಂದೆ ಬಂದಿದ್ದಾರೆ. 1 ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.

ಕೋವಿಡ್19ಗಾಗಿ ಕ್ರಮ: ಫುಲ್ ಶಟ್ ಡೌನ್, 30 ಫೀವರ್ ಕ್ಲಿನಿಕ್ ಸ್ಥಾಪನೆ ಕೋವಿಡ್19ಗಾಗಿ ಕ್ರಮ: ಫುಲ್ ಶಟ್ ಡೌನ್, 30 ಫೀವರ್ ಕ್ಲಿನಿಕ್ ಸ್ಥಾಪನೆ

ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ''ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅಮೂಲ್ಯ ತಾನು ಉಳಿತಾಯ ಮಾಡಿದ್ದ 1 ಲಕ್ಷ ರೂಪಾಯಿಗಳನ್ನು COVID19 ಪರಿಹಾರಕ್ಕೆ ನೀಡಿದ್ದಾರೆ. ಆಕೆಯ ನಿಸ್ವಾರ್ಥತೆ, ಮಾನವೀಯತೆ, ದಯೆ ನಿಜವಾಗಿಯೂ ಬೆರಗುಗೊಳಿಸುವಂತದ್ದು. ನಿಮ್ಮ ಕೊಡುಗೆಯನ್ನು ಸ್ವೀಕರಿಸಿದ್ದಕ್ಕಾಗಿ ನಾವು ಆಭಾರಿಯಾಗಿದ್ದೇವೆ.'' ಎಂದು ಅಭಿನಂದನೆ ಸಲ್ಲಿಸಿದ್ದಾರೆ.

Amulya, A Student Has Donated 1 Lakh Rupees For Covid-19 Relief

ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಮೂಲ್ಯ ಹಣ ನೀಡಿದ್ದಾರೆ. ಈ ವೇಳೆ ಆರೋಗ್ಯ ಸಚಿವ ಶ್ರೀರಾಮುಲು, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಜೊತೆಗಿದ್ದರು.

ಕೊರೊನಾ ಭಯ: ಅಧಿವೇಶನ ಮುಂದೂಡಲು ಶಾಸಕರ ಆಗ್ರಹಕೊರೊನಾ ಭಯ: ಅಧಿವೇಶನ ಮುಂದೂಡಲು ಶಾಸಕರ ಆಗ್ರಹ

''ನಾವೆಲ್ಲರೂ ದಯವಿಟ್ಟು ಮನೆಯಲ್ಲಿಯೇ ಇದ್ದು, ಈ ರೋಗದ ವಿರುದ್ದ ಒಟ್ಟಾಗಿ ಹೋರಾಡೋಣ'' ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

English summary
Amulya, a student of BMS Eng College has donated 1 lakh rupees from her savings for Covid-19 relief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X