ಅಪಾರ್ಟ್‌ಮೆಂಟ್‌ ನಿವಾಸಿಗಳೊಂದಿಗೆ ಟ್ರಾಫಿಕ್‌ ಪೊಲೀಸರ ಒಪ್ಪಂದ; ಏನದು?

ಸಿಲಿಕಾನ್‌ ಸಿಟಿ ಬೆಂಗಳೂರನ್ನು ಕಾಡುತ್ತಿರುವ ಟ್ರಾಫಿಕ್‌ ಸಮಸ್ಯೆಯನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಹರಸಾಹಸ ಪಡುತ್ತಲೇ ಇದ್ದಾರೆ. ಈಗಾಗಲೇ ಟ್ರಾಫಿಕ್‌ ಕಂಟ್ರೋಲ್‌ಗೆ ಟೆಕ್ನಾಲಜಿ ಮೊರೆ ಹೋಗಿರುವ ಪೊಲೀಸರು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (ಎಐ) ವ್ಯವಸ್ಥೆ ಕೂಡ ಜಾರಿ ಮಾಡಿದ್ದಾರೆ. ಇದೀಗ ಟ್ರಾಫಿಕ್‌ ನಿಯಂತ್ರಣಕ್ಕಾಗಿ ಪೊಲೀಸರು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಸದ್ಯ ಬೆಂಗಳೂರು ಟ್ರಾಫಿಕ್ ಪೊಲೀಸ್, ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ (ಬಿಎಎಫ್) ಜೊತೆ ವಿಶೇಷ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಇದು ರಸ್ತೆ ಸುರಕ್ಷತೆ ಹಾಗೂ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದು ಮುಖ್ಯವಾಗಿ ಟ್ರಾಫಿಕ್‌ ತಡೆಗಟ್ಟಲು ರಿಯಲ್‌ ಟೈಮ್‌ ಟ್ರಾಫಿಕ್‌ ಅಲರ್ಟ್‌ಗಳ ಮಾಹಿತಿ ಹಂಚಿಕೊಳ್ಳುವ ಉದ್ದೇಶವನ್ನು ಹೊಂದಿದೆ.

An Agreement Has Been Made With The Traffic Police And Apartment Residents

ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮತ್ತು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಅಧ್ಯಕ್ಷ ವಿಕ್ರಮ್ ರೈ ಮತ್ತು ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ಈ ಒಪ್ಪಂದ ನಡೆದಿದೆ.

ಈ ಬಗ್ಗೆ ಮಾತನಾಡಿರುವ ಅನುಚೇತ್, ಬೆಂಗಳೂರು ವ್ಯಾಪ್ತಿಯಲ್ಲಿ 1,200 ಅಪಾರ್ಟ್‌ಮೆಂಟ್ ಸಂಘಟನೆಗಳಿವೆ. ಈ ಸಂಘಗಳ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರು ಬರೋಬ್ಬರಿ 11 ಲಕ್ಷ ಜನರನ್ನು ತಲುಪಬಹುದಾಗಿದೆ. ಟ್ರಾಫಿಕ್‌ ಸಮಸ್ಯೆಗಳ ಬಗ್ಗೆ ಮಾಹಿತಿ ಪರಸ್ಪರ ವಿನಿಮಯ ಮಾಡಿಕೊಳ್ಳಲು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಒಪ್ಪಂದದಲ್ಲಿ ಏನೇನಿದೆ?: ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್‌ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಜೊತೆಗೆ ಮಾಹಿತಿ ಹಂಚಿಕೊಳ್ಳಲಿದೆ. ಇದು ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ತಮ್ಮ ಪ್ರಯಾಣವನ್ನು ಪ್ಲ್ಯಾನ್‌ ಮಾಡಿಕೊಳ್ಳಲು ನೆರವಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೂ ಅನುಕೂಲವಾಗಲಿದೆ.

An Agreement Has Been Made With The Traffic Police And Apartment Residents

ಟ್ರಾಫಿಕ್‌ ಸಮಸ್ಯೆಗೆ ಸಂಬಂಧಿಸಿದ ಡೇಟಾ ಸೇರಿದಂತೆ ಇನ್ನಿತರ ಮಾಹಿತಿ ಹಂಚಿಕೊಳ್ಳಲು ಈ ಒಪ್ಪಂದ ಅನುಕೂಲ ಮಾಡಿಕೊಡಲಿದೆ. ಈ ಸಂಬಂಧ ಕಾರ್ಯಾಗಾರಗಳು, ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳು ಸೇರಿ ಇನ್ನಿತರೆ ಕಾರ್ಯಕ್ರಮಗಳನ್ನು ಆಯೋಜಿಸಲು, ನಿವಾಸಿಗಳಿಗೆ ರಸ್ತೆ ಸುರಕ್ಷತೆ ಹಾಗೂ ವಾಹನ ಚಾಲನೆ ಬಗ್ಗೆ ಮಾಹಿತಿ ನೀಡುವುದು ಈ ಒಪ್ಪಂದದ ಉದ್ದೇಶ ಎನ್ನಲಾಗಿದೆ. ಇದಕ್ಕಾಗಿ ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಆಪ್‌ ಮೂಲಕ ಮಾಹಿತಿ ಹಂಚಿಕೊಳ್ಳಲಿದೆ.

ಪೊಲೀಸರ ಈ ಒಪ್ಪಂದದಿಂದ ಬೆಂಗಳೂರು ನಗರದ ಟ್ರಾಫಿಕ್‌ ಸಮಸ್ಯೆಗೆ ಶೀಘ್ರ ಪರಿಹಾರಗಳನ್ನು ಕಂಡುಕೊಳ್ಳಬಹುದು. ನಿವಾಸಿಗಳು ಕೂಡ ಟ್ರಾಫಿಕ್‌ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್‌ ಸಮಸ್ಯೆ ಇದೆ. ಅದಕ್ಕೆ ಪರ್ಯಾಯವಾಗಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ವಿನಿಮಯಕ್ಕೂ ಈ ಕ್ರಮ ಒಳ್ಳೆಯದು ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+