ಕರ್ನಾಟಕದಲ್ಲಿ ದುರಾಡಳಿತದಿಂದ ಬೇಸತ್ತ ಜನರಿಗೆ ಕಾಂಗ್ರೆಸ್ ಮೇಲೆ ಒಲವು: ಶಶಿ ತರೂರ್ ವಿಶ್ವಾಸ
ಬೆಂಗಳೂರು, ಏಪ್ರಿಲ್ 09: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕಳೆದ ನಾಲ್ಕು ವರ್ಷಗಳನ್ನು ರಾಜ್ಯದ ಜನರು ದುರಾಡಳಿತವನ್ನು ನೋಡಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಪರ್ಯಾಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ತಿಳಿಸಿದರು.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದುರಾಡಳಿತ ಇದ್ದಾಗ ಜನರು ಅಭಿವೃದ್ಧಿ ನೋಡಲು ಹೇಗೆ ಸಾಧ್ಯ. ಜನರು ಅನಿವಾರ್ಯವಾಗಿ ಪರ್ಯಾಯ ಸರ್ಕಾರ ಬೇಕು ಎಂದು ನಿಶ್ಚಯಿಸಿದ್ದಾರೆ ಎಂದರು.

ಈ ಹಿಂದಿನ 4 ವರ್ಷಗಳಲ್ಲಿ ಕರ್ನಾಟಕದ ಜನರು ದುರಾಡಳಿತ ನೋಡಿದ್ದಾರೆ. ಈ ಮೂಲಕ ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಶಕ್ತಿಯಾಗಿ ನೋಡಲು ಬಯಸಿದ್ದಾರೆ. ಬಿಜೆಪಿ ಸರ್ಕಾರದಿಂದ ಜನರ ಅಗತ್ಯತೆಗಳನ್ನು ಈಡೇರಿಸಲಾಗಿಲ್ಲ. ಜನರ ಅಗತ್ಯಗಳನ್ನು ಈಡೇರಿಸಲು ಕಾಂಗ್ರೆಸ್ ಈಗಾಗಲೇ ನಿರ್ದಿಷ್ಟ ಭರವಸೆಗಳನ್ನು ನೀಡಿದೆ ಎಂದು ಅವರು ಹೇಳಿದರು.
ಕಳೆದ 3-4 ವರ್ಷಗಳಿಂದ ರಾಜ್ಯದಲ್ಲಿ ಐಟಿ ಹೂಡಿಕೆ ಕುಸಿಯುತ್ತಿದೆ ಎಂದು ಅವರು ಆರೋಪಿಸಿದರು. ಬಹಳ ಶಕ್ತಿ ಸಾಮರ್ಥ್ಯದ ಬೆಂಗಳೂರಿಗೆ ಕೆಲವು ವರ್ಷಗಳ ಹಿಂದೆ ಐಟಿ ಹೂಡಿಕೆಗೆ ಹೆಚ್ಚು ಒಲವು ತೋರಿದ ನಗರವಾಗಿತ್ತು. ಆದರೆ ಕಳೆದ 3-4 ವರ್ಷಗಳಿಂದ ಹೂಡಿಕೆಗಳು ಕುಸಿಯುತ್ತಿದೆ. ಇದು ಕಳವಳಕಾಯಿ ಸಂಗತಿ ಎಂದು ಅವರು ವಿಷಾಧಿಸಿದರು.
ಕಾಂಗ್ರೆಸ್‌ನಿಂದ 58 ಸ್ಥಾನದ ಹೆಸರು ಪ್ರಕಟ ಬಾಕಿ
ಹಿಂಡೆನ್‌ಬರ್ಗ್-ಅದಾನಿ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯ ಅಗತ್ಯವಿಲ್ಲ ಎಂದು ಶರದ್ ಪವಾರ್ ಹೇಳಿಕೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷವು ಶೇಕಡಾ 50 ರಷ್ಟು ಬಹುಮತ ಹೊಂದಿದೆ. ಎನ್‌ಸಿಪಿ ಮುಖ್ಯಸ್ಥರ ತರ್ಕವನ್ನು ಅರ್ಥಮಾಡಿಕೊಳ್ಳಬಹುದು ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆ ಭಾನುವಾರ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕರ್ನಾಟಕ ಚುನಾವಣೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಗೆ ಕುರಿತು ವರಿಷ್ಠರ ಸಭೆ ನಡೆಯಲಿದೆ.
ಈ ಸಭೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಇನ್ನೂ 58 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದು ಬಾಕಿ ಇದೆ.
ಕಾಂಗ್ರೆಸ್ ಮಾರ್ಚ್ 25 ರಂದು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರಿತ್ತು.

ಸ್ಥಳೀಯರಲ್ಲಿ ಭಿನ್ನಾಭಿಪ್ರಾಯ: ಕೋಲಾರದಿಂದ ಹಿಂದೆ ಸರಿದ ಸಿದ್ದು
ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13 ರಂದು ಮತ ಎಣಿಕೆ ಜರುಗಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಮನಸ್ಸು ಮಾಡಿದ್ದಾರೆ. ಆದರೆ ಅದು ಕ್ಷೇತ್ರದ ಸ್ಥಳೀಯ ಮುಖಂಡರ ನಡುವೆ ಭಿನ್ನಾಭಿಪ್ರಾಯ ಮೂಡಿಸಿತು. ಹೀಗಾಗಿ ಆ ನಿರ್ಧಾರ ಕೂ ಬಿಡುವಂತೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಕೋಲಾರ ಗೋಲ್ಡ್ ಫೀಲ್ಡ್ ಕ್ಷೇತ್ರದಿಂದ ಎಂ ರೂಪಕಲಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕರ್ನಾಟಕದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿ (ಎಸ್) ಪ್ರಚಾರ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ, ಬಿಜೆಪಿ ಮತ್ತು ಜೆಡಿಎಸ್ ಮೂಲೆಗುಂಪಾಗಲಿವೆ ಎಂದು ಅವರು ಭವಿಷ್ಯ ನುಡಿದರು.












Click it and Unblock the Notifications