Anant Nag: ಸದ್ಯಕ್ಕೆ ಇಲ್ಲ ರಾಜಕೀಯ ಎಂಟ್ರಿ, ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆ ಮುಂದೂಡಿಕೆ

ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್ 1980 ರಲ್ಲಿ ಅಂದಿನ ಜನತಾ ಪಾರ್ಟಿಯಲ್ಲಿದ್ದರು.

ಬೆಂಗಳೂರು, ಫೆಬ್ರವರಿ. 22: ರಾಜ್ಯ ರಾಜಕೀಯದಲ್ಲಿ ಮತ್ತೆ ಸುದ್ದಿಗೆ ಬಂದಿದ್ದ ನಟ ಅನಂತ್ ನಾಗ್ ರಾಜಕೀಯ ಎಂಟ್ರಿ ಮುಂದೂಡಿಕೆಯಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಾಗ ಮತ್ತೆ ರಾಜಕೀಯ ಪ್ರವೇಶ ಮಾಡುವ ಒಲವನ್ನು ನಟ, ಮಾಜಿ ಸಚಿವ ಅನಂತ್ ನಾಗ್ ವ್ಯಕ್ತಪಡಿಸಿದ್ದರು.

ಬುಧವಾರ ಸಂಜೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ನಟ ಇಂದು ಬೆಜೆಪಿಗೆ ಸೇರ್ಪಡೆಯಾಗಿಲ್ಲ. ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ ಎಂದು ಮಾಹಿತಿ ಬಂದಿದೆ.

Anant Nag: Actor Anant Nag postpones joining BJP

ಅನಂತ್ ನಾಗ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅವರೇ ಗೈರಾಗಿದ್ದಾರೆ. ಬೆಳಗ್ಗೆಯಿಂದ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಜನರಲ್ಲಿ ಆಸಕ್ತಿ ಮೂಡಿತ್ತು. ಆದರೇ ಕೊನೆ ಕ್ಷಣದಲ್ಲಿ ಕಾರ್ಯಕ್ರಮಕ್ಕೆ ಗೈರಾಗಿದ್ದು, ಮುಂದಿನ ವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಟ, ರಾಜಕಾರಣಿಯಾಗಿ ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್ 1980 ರಲ್ಲಿ ಅಂದಿನ ಜನತಾ ಪಾರ್ಟಿಯಲ್ಲಿದ್ದರು. 1983ರ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದರು. 1983ರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು. ಬಳಿಕ 1994ರಲ್ಲಿ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2004 ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಸದ್ಯ ರಾಜ್ಯ ರಾಜಕೀಯದಲ್ಲಿ ಪ್ರಚಾರ ಚಟುವಟಿಕೆಗಳು ನಡೆಯುತ್ತಿದ್ದು, ಪಕ್ಷಗಳು ಚಿತ್ರಂಗದವರನ್ನು ಸ್ಟಾರ್ ಪ್ರಚಾರಕರಾಗಿ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಇದೇ ವೇಳೆ ಸಿನಿ ರಂಗದವರು ಕೂಡ ರಾಜಕೀಯ ರಂಗದಲ್ಲಿ ತೊಡಗಿಕೊಳ್ಳಲು ಅವಕಾಶ ಹುಡುಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+