ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರೀಯ ವಿದ್ಯಾಲಯದಲ್ಲಿ ಕನ್ನಡ ಕಲಿಕೆ: ಅನಂತಕುಮಾರ್‌ ಭರವಸೆ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 14: ಕೇಂದ್ರೀಯ ವಿದ್ಯಾಲಯಗಳಲ್ಲಿ ಮಾತೃಭಾಷೆಯನ್ನು ಬೋಧಿಸುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿಯಿಂದಲೇ ಕರ್ನಾಟಕದಲ್ಲಿ ಕನ್ನಡ ಸೇರಿದಂತೆ ಆಯಾ ರಾಜ್ಯಗಳಲ್ಲಿ ರಾಜ್ಯದ ಮಾತೃಭಾಷೆಯನ್ನು ಬೋಧಿಸಲು ನಿರ್ಣಯ ಅಂಗೀಕರಿಸುವಂತೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಕೇಂದ್ರ ಸಚವ ಅನಂತಕುಮಾರ್‌ ತಿಳಿಸಿದರು.

72ನೇ ಸ್ವಾತಂತ್ರ್ಯ ದಿನಾಚರಣೆ 2018

ಕೇಂದ್ರೀಯ ವಿದ್ಯಾಲಯಗಳಲ್ಲಿ ಸದ್ಯದಲ್ಲಿ ಹಿಂದಿ, ಇಂಗ್ಲಿಷ್‌ ಬೋಧಿಸಲಾಗುತ್ತಿದೆ. ಇದರೊಂದಿಗೆ ಮಾತೃ ಭಾಷೆಯನ್ನು ಒಂದು ವಿಷಯವನ್ನಾಗಿ ಬೋಧಿಸಬೇಕೆಂಬುದು ಸ್ಥಳೀಯರ ಒತ್ತಾಯ. ಈ ನಿಟ್ಟಿನಲ್ಲಿ ಸಂಸದ ಧ್ರುವನಾರಾಯಣ ಹಾಗೂ ಸಚಿವ ಎನ್‌. ಮಹೇಶ್‌ ಅವರು ಕೂಡ ತಮ್ಮ ಸಹಮತ ಇದೆ ಎಂದು ತಿಳಿಸಿದ್ದಾರೆ.

ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಪಾಳಿ ತರಗತಿ: ವಿರೋಧ ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಪಾಳಿ ತರಗತಿ: ವಿರೋಧ

ರಾಜ್ಯದ 46 ಕೇಂದ್ರೀಯ ವಿದ್ಯಾಲಯಗಳಲ್ಲೂ ಒಂದನೇ ತರಗತಿಯಿಂದ ಕನ್ನಡವನ್ನೂ ಬೋಧಿಸುವುದರ ಜತೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಆಯಾ ಮಾತೃಭಾಷೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಜಾವಡೇಕರ್‌ ಅವರೊಂದಿಗೆ ಶೀಘ್ರ ಚರ್ಚೆ ನಡೆಸುತ್ತೇವೆ.

Ananth Kumar assures Kannada teaching in Kendriya Vidyalayas soon!

ನಾನು ಸಹ ಕನ್ನಡ ಮಾಧ್ಯಮದಲ್ಲಿ ಓದಿದವನು, ಆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದವನು ನಾನೊಬ್ಬನೆ, ಆಗ 35 ಅಂಕಗಳು ಬಂದು ಪಾಸಾಗಿದ್ದರೆ ಎಲ್ಲರೂ ಸಂತಸಪಡುತ್ತಿದ್ದರು ಆದರೆ ಈಗ 90 ಅಂಕ ಬಂದರೂ ಆ ಖುಷಿ ಸಿಗುವುದಿಲ್ಲ, ತೃಪ್ತಿ ಎನ್ನುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

English summary
Union minister Ananth Kumar has assured that regional languages including Kannada will be taught in Kendriya Vidyalayas of respective states and he will discuss with Human Resource Development minister Prakash Javadekar soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X