ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೇ ಜಯ: ಅನಂತ ಕುಮಾರ್ ವಿಶ್ವಾಸ
ಬೆಂಗಳೂರು, ಜೂನ್ 8: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಪಧವೀದರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿ ನಂತರ ಮಾತನಾಡಿದರು. ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ ಅವರು ಈ ರಾಜ್ಯ ಸರ್ಕಾರ ದಿಕ್ಕು ತಪ್ಪಿದೆ.ಅತಂತ್ರ ಸ್ಥಿತಿಯಲ್ಲಿದೆ, ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ ಎಂದಿದ್ದಾರೆ.
ಸರ್ಕಾರ ರಚನೆ ಆದ ಮೇಲೂ 25 ಸಚಿವರು ಖಾತೆ ರಹಿತವಾಗಿದ್ದಾರೆ, ಖಾತೆ ಹಂಚಿಕೆಯಲ್ಲಿ ಎರಡೂ ಪಕ್ಷಗಳಲ್ಲಿ ಬಿಕ್ಕಟ್ಟು ತಲೆದೋರಿದೆ. ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಮುನರ್ ಸಮೀಕರಣ ನಡೆಯಲಿದೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಇಷ್ಟವಿಲ್ಲ. ಈ ಮೈತ್ರಿ ಸರ್ಕಾರ ರಾಜ್ಯದ ಜನತೆಗೂ ಇಷ್ಟವಿಲ್ಲ, ಸರ್ಕಾರ ಬಿಕ್ಕಟ್ಟು ಮತ್ತೊಂದು ರಾಜಕೀಯ ಪುನರ್ ಸಮೀಕರಣಕ್ಕೆ ದಾರಿ ಮಾಡಿಕೊಡಲಿ ಎಂದು ಅನಂತ ಕುಮಾರ್ ಹೇಳಿದ್ದಾರೆ.












Click it and Unblock the Notifications