ಡಾ.ರಾಜ್‌ಗೆ ಭಾರತರತ್ನ ನೀಡಿ : ಅನಂತ್ ಕುಮಾರ್

ಬೆಂಗಳೂರು, ಜ.31 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಯನಗರದ ಸೌತ್‌ಎಂಡ್ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ವರನಟ ಡಾ.ರಾಜ್‌ ಕುಮಾರ್ ಅವರ 14.7 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಗುರುವಾರ ಸಂಸದ ಅನಂತ್ ಕುಮಾರ್ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅನಂತ್ ಕುಮಾರ್, ರಾಜ್‌ ಕುಮಾರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಹಿಂದಿನ ಬಿಜೆಪಿ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಅದರಂತೆ ಕೇಂದ್ರ ಸರ್ಕಾರ ರಾಜ್‌ ಕುಮಾರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು. [ಡಾ.ರಾಜ್ ಕಂಚಿನ ಪ್ರತಿಮೆ ಅನಾವರಣ]

ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಡಾ.ರಾಜ್‌ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ ರಾ ಗೋವಿಂದು, ಉಪಮೇಯರ್ ಇಂದಿರಾ, ಬಿಬಿಎಂಪಿ ಆಯುಕ್ತ ಎಂ ಲಕ್ಷ್ಮೀನಾರಾಯಣ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೇಳಿದ್ದೇನು? [ಚಿತ್ರಗಳಲ್ಲಿ ನೋಡಿ ರಾಜ್ ಪ್ರತಿಮೆ]

ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ

ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ

ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅನಂತ್ ಕುಮಾರ್ ರಾಜ್ ಕುಮಾರ್ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ. ಕರ್ನಾಟಕದ ಪ್ರತಿಯೊಬ್ಬರ ಹೃದಯದಲ್ಲಿ ಅವರು ಸ್ಥಾನ ಪಡೆದಿದ್ದಾರೆ. ಆದರೆ, ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕದಿರುವುದು ಬೇಸರದ ಸಂಗತಿ ಎಂದರು.

ಕಾಂಗ್ರೆಸ್ ಸರ್ಕಾರ ಒತ್ತಾಯಿಸಬೇಕು

ಕಾಂಗ್ರೆಸ್ ಸರ್ಕಾರ ಒತ್ತಾಯಿಸಬೇಕು

ಕರ್ನಾಟಕದಲ್ಲಿನ ಹಿಂದಿನ ಬಿಜೆಪಿ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿ ರಾಜ್ ಕುಮಾರ್ ಅವರಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿತ್ತು. ಅದರಂತೆ ಕೇಂದ್ರ ಸರ್ಕಾರ ರಾಜ್‌ ಕುಮಾರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ಕೇಂದ್ರಕ್ಕೆ ಒತ್ತಾಯಿಸಬೇಕು ಎಂದು ಹೇಳಿದರು.

ರಾಜ್ ಸೇವೆ ಸ್ಮರಣೀಯ

ರಾಜ್ ಸೇವೆ ಸ್ಮರಣೀಯ

ಡಾ.ರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗ, ಕನ್ನಡ ಭಾಷೆ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಪದಗಳಲ್ಲಿ ಕಟ್ಟಿಕೊಡಲು ಸಾಧ್ಯವಿಲ್ಲ. ಇಂತಹ ಅಪಾರ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಡಬ್ಬಿಂಗ್ ಪಿಡುಗು ಕಾಡುತ್ತಿದೆ.

ಡಬ್ಬಿಂಗ್ ಪಿಡುಗು ಕಾಡುತ್ತಿದೆ.

ಕನ್ನಡ ಚಿತ್ರರಂಗಕ್ಕೆ ಡಬ್ಬಿಂಗ್ ಪಿಡುಗು ಕಾಡುತ್ತಿದೆ. ಇದರ ವಿರುದ್ಧ ಕಳೆದ ವರ್ಷವೇ ಹೋರಾಟ ನಡೆಸಿ ಕೇಂದ್ರ ಸಚಿವ ಸಚಿನ್ ಪೈಲಟ್ ಅವರಿಗೂ ಮನವಿ ಸಲ್ಲಿಸಲಾಗಿತ್ತು. ಫೆ.5ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಆಗ ಈ ವಿಷಯ ಪ್ರಸ್ತಾಪಿಸಲಾಗುವುದು ಎಂದು ಅನಂತ್ ಕುಮಾರ್ ಹೇಳಿದರು.

20 ಸ್ಥಾನ ಖಚಿತ

20 ಸ್ಥಾನ ಖಚಿತ

ಮಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ. ಇದು ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯಕವಾಗಲಿಗೆ ಎಂದು ಅನಂತ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+