ಮೊದಲ ದಿನ ನಾಮಪತ್ರ ಸಲ್ಲಿಸಿದ ಅನಂತ್ ಕುಮಾರ್
ಬೆಂಗಳೂರು, ಮಾ. 19 : ಚುನಾವಣೆ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅಧಿಕೃತವಾಗಿ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.
ಬುಧವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ದೊಡ್ಡ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅನಂತ್ ಕುಮಾರ್ ಜಯನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ವಿ.ಸೋಮಣ್ಣ ಮುಂತಾದ ನಾಯಕರು ಈ ಸಂದರ್ಭದಲ್ಲಿ ಅನಂತ್ ಕುಮಾರ್ ಜೊತೆಗಿದ್ದರು. [ಬಿರುಸಿನ ಮತಯಾಚನೆ ಚಿತ್ರಗಳು]
ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅನಂತ್ ಕುಮಾರ್, ನಮ್ಮ ಬೆಂಗಳೂರು ನಮ್ಮ ಭಾರತ ಎಂಬ ಕಲ್ಪನೆಯನ್ನು ಮುಂದಿಟ್ಟುಕೊಂಡು ನಾಮಪತ್ರ ಸಲ್ಲಿಸಿದ್ದೇನೆ. ಎದುರಾಳಿ ಪಕ್ಷದ ಅಭ್ಯರ್ಥಿ ಬಗ್ಗೆ ನನಗೆ ಯಾವುದೇ ಭಯವಿಲ್ಲ. ಬೆಂಗಳೂರಿನ ಜನರು ಅಭಿವೃದ್ಧಿಯ ಸಿಕ್ಸರ್ ಬಾರಿಸಲು ನಮ್ಮ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ನನ್ನ ಪರವಾಗಿ ಮತ ನೀಡಲಿದ್ದಾರೆ ಎಂದರು. [ಚಿತ್ರಕೃಪೆ ಅನಂತ್ ಕುಮಾರ್ ಫೇಸ್ ಬುಕ್]

ನಾಮಪತ್ರ ಸಲ್ಲಿಸಿದ ಅನಂತ್ ಕುಮಾರ್
ಬುಧವಾರ ಜಯನಗರದಲ್ಲಿನ ಬಿಬಿಎಂಪಿ ಕಚೇರಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ನಾಮಪತ್ರ ಸಲ್ಲಿಸಿದರು. ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್, ಮಾಜಿ ಡಿಸಿಎಂ ಆರ್ ಅಶೋಕ್, ಮಾಜಿ ಸಚಿವ ವಿ.ಸೋಮಣ್ಣ ಹಾಜರಿದ್ದರು.

ಆರನೇ ಬಾರಿಗೆ ಚುನಾವಣೆ ಕಣಕ್ಕೆ
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಚುನಾವಣೆ ಅಧಿಸೂಚನೆ ಪ್ರಕಟಗೊಂಡ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. 5 ಬಾರಿ ಗೆಲುವು ಸಾಧಿಸಿರುವ ಅವರು ಆರನೇ ಬಾರಿಗೆ ಚುನಾವಣೆ ಕಣಕ್ಕೆ ಧುಮುಕಿದ್ದಾರೆ.

ದೊಡ್ಡ ಗಣಪನಿಗೆ ವಿಶೇಷ ಪೂಜೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮೊದಲು ಮಲ್ಲೇಶ್ವರಂನಲ್ಲಿರುವ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ತೇಜಸ್ವಿನಿ ಅನಂತ್ ಕುಮಾರ್, ಮಾಜಿ ಡಿಸಿಎಂ ಆರ್.ಅಶೋಕ್, ಮಾಜಿ ಸಚಿವ ಸೋಮಣ್ಣ ಸೇರಿದಂತೆ ಹಲವಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎದುರಾಳಿ ಪಕ್ಷದ ಬಗ್ಗೆ ಭಯವಿಲ್ಲ
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅನಂತ್ ಕುಮಾರ್, ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ತಿಳಿದಿಲ್ಲದ ಎದುರಾಳಿ ಪಕ್ಷದ ಬಗ್ಗೆ ನನೆಗೆ ಯಾವ ಭಯವೂ ಇಲ್ಲ. ನಮ್ಮ ಕ್ಷೇತ್ರದ ಜನರು ಅಭಿವೃದ್ಧಿಯ ಸಿಕ್ಸರ್ ಬಾರಿಸಲು ನನಗೆ ಮತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನ್ಮಮ ಬೆಂಗಳೂರು ನಮ್ಮ ಭಾರತ
ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ನಮ್ಮ ಬೆಂಗಳೂರು, ನಮ್ಮ ಭಾರತ ಎಂಬ ಉದ್ದೇಶದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಬೆಂಗಳೂರಿನ ಜನರು ನಮ್ಮ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ನನ್ನ ಮೂಲಕ ಮತ ನೀಡಲಿದ್ದಾರೆ ಎಂದು ಹೇಳಿದರು.


Click it and Unblock the Notifications
