• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ್ ಕುಮಾರ್ ಅಂತಿಮ ದರ್ಶನ : ಸ್ಥಳ ಪರಿಶೀಲಿಸಿದ ಪರಮೇಶ್ವರ

|

ಬೆಂಗಳೂರು, ನವೆಂಬರ್ 12 : ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು.

ಅನಂತ್ ಕುಮಾರ್ ಅವರ ಪಾರ್ಥಿವ ಶರೀರಿವನ್ನು ಅಂತಿಮ ದರ್ಶನಕ್ಕಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಡಲಾಗುತ್ತದೆ. ಕೇಂದ್ರ ಸಚಿವರು ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನಕ್ಕಾಗಿ ಆಗಮಿಸಲಿದ್ದಾರೆ.

ಅನಂತ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರೈಲು ವ್ಯವಸ್ಥೆ

ಗೃಹ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ನ್ಯಾಷನಲ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಭದ್ರತೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.

1959-2018: ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಹೆಜ್ಜೆ ಗುರುತು

ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

2014ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆ ನೆನಪು

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, 'ಅನಂತ್ ಕುಮಾರ್ ಅವರ ದರ್ಶನಕ್ಕೆ ಸಾರ್ವಜನಿಕರು, ಗಣ್ಯರು ಅವಕಾಶ ಮಾಡಿಕೊಡಲು ಬಿಬಿಎಂಪಿ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ' ಎಂದರು.

'ಕೇಂದ್ರ ಗೃಹ ಸಚಿವರು, ಉಪ ರಾಷ್ಟ್ರಪತಿ, ಹಲವು ಕೇಂದ್ರ ಸಚಿವರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ನೀಡಲು ಪರಿಶೀಲನೆ ನಡೆಸಲಾಗಿದೆ' ಎಂದು ಪರಮೇಶ್ವರ ಹೇಳಿದರು.

English summary
A large number of people may gathered at National College ground Basavanagudi, Bengaluru on November 13, 2018 to pay last tribute to Bengaluru South constituency MP and Union minister Ananth Kumar. Home minister Dr.G.Parameshwar inspected the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X