ಅನಂತ್ ಅಸ್ತಂಗತ: ನ್ಯಾಶನಲ್ ಕಾಲೇಜು ಮೈದಾನದಲ್ಲಿ ಬಿಗಿ ಭದ್ರತೆ
Recommended Video

ಬೆಂಗಳೂರು, ನವೆಂಬರ್ 13: ಶ್ವಾಸಕೋಶದ ಕ್ಯಾನ್ಸರ್ ನಿಂದ ಸೋಮವಾರ ಬೆಳಿಗ್ಗೆ ವಿಧಿವಶರಾದ ಕೇಂದ್ರ ಸಚಿವ ಅನಂತ್ ಕುಮಾರ್(59) ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಗೃಹಸಚಿವ ರಾಜನಾಥ್ ಸಿಂಗ್, ರೈಲ್ವೇ ಸಚಿವ ಪಿಯೂಶ್ ಗೋಯೆಲ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ರಾಮನಾಥ್ ಅಠಾವಳೆ, ರಾಧಾಮೋಹನ್ ಸಿಂಗ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ನೂರಾರು ಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ 250 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಬಸವನಗುಡಿ ನ್ಯಾಶನಲ್ ಕಾಲೇಜಿನಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಾರ್ಯಾಲಯದವರೆಗೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿಯೇ ಅನಂತ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಇಂದು ಸಂಜೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ತಿಂಗಳಿನಿಂದ ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಬೆಂಗಳೂರಿಗೆ ಆಗಮಿಸಿ, ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.12 ರ ಬೆಳಗ್ಗಿನ ಜಾವ 02 ಗಂಟೆಗೆ ವಿಧಿವಶರಾದರು.












Click it and Unblock the Notifications