ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ್ ಅಸ್ತಂಗತ: ನ್ಯಾಶನಲ್ ಕಾಲೇಜು ಮೈದಾನದಲ್ಲಿ ಬಿಗಿ ಭದ್ರತೆ

|
Google Oneindia Kannada News

Recommended Video

Ananth Kumar Demise : ಅನಂತ್ ಕುಮಾರ್ ಪಾರ್ಥಿವ ಶರೀರ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ

ಬೆಂಗಳೂರು, ನವೆಂಬರ್ 13: ಶ್ವಾಸಕೋಶದ ಕ್ಯಾನ್ಸರ್ ನಿಂದ ಸೋಮವಾರ ಬೆಳಿಗ್ಗೆ ವಿಧಿವಶರಾದ ಕೇಂದ್ರ ಸಚಿವ ಅನಂತ್ ಕುಮಾರ್(59) ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ಮಾಜಿ ಸಿಎಂ ಪತ್ನಿಯನ್ನು ಸೋಲಿಸಿ ರಾಜಕೀಯ ಬದುಕು ಆರಂಭಿಸಿದ್ದ ಅನಂತ್ ಕುಮಾರ್ಮಾಜಿ ಸಿಎಂ ಪತ್ನಿಯನ್ನು ಸೋಲಿಸಿ ರಾಜಕೀಯ ಬದುಕು ಆರಂಭಿಸಿದ್ದ ಅನಂತ್ ಕುಮಾರ್

ಗೃಹಸಚಿವ ರಾಜನಾಥ್ ಸಿಂಗ್, ರೈಲ್ವೇ ಸಚಿವ ಪಿಯೂಶ್ ಗೋಯೆಲ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ರಾಮನಾಥ್ ಅಠಾವಳೆ, ರಾಧಾಮೋಹನ್ ಸಿಂಗ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ನೂರಾರು ಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ 250 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಅಗಲಿದ ಕಿರಿಯ ಮಿತ್ರನಿಗೆ ದೇವೇಗೌಡರ ಭಾವಪೂರ್ಣ ನುಡಿ ನಮನಅಗಲಿದ ಕಿರಿಯ ಮಿತ್ರನಿಗೆ ದೇವೇಗೌಡರ ಭಾವಪೂರ್ಣ ನುಡಿ ನಮನ

Ananth Kumar No more: Tight security in National college grounds

ಬಸವನಗುಡಿ ನ್ಯಾಶನಲ್ ಕಾಲೇಜಿನಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಾರ್ಯಾಲಯದವರೆಗೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿಯೇ ಅನಂತ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಅನಂತ ಕುಮಾರ್ ಮಾಡಿದ ಮಹತ್ವದ ಸಾಧನೆಗಳೇನು? ವಿವರ ಇಲ್ಲಿದೆ...ಅನಂತ ಕುಮಾರ್ ಮಾಡಿದ ಮಹತ್ವದ ಸಾಧನೆಗಳೇನು? ವಿವರ ಇಲ್ಲಿದೆ...

ಇಂದು ಸಂಜೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ತಿಂಗಳಿನಿಂದ ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಬೆಂಗಳೂರಿಗೆ ಆಗಮಿಸಿ, ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.12 ರ ಬೆಳಗ್ಗಿನ ಜಾವ 02 ಗಂಟೆಗೆ ವಿಧಿವಶರಾದರು.

English summary
Tight security deployed in National college grounds in Basavanagudi, ahead of last respect to union minister Ananth Kumar, who died on Nov 12 due to Cancer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X