• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮರಾಜಪೇಟೆಯ ಚಿತಾಗಾರದಲ್ಲಿ ನಾಳೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ

|
   Ananth Kumar Demise : ಅನಂತ್ ಕುಮಾರ್ ಅಂತ್ಯಕ್ರಿಯೆ ನಾಳೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ | Oneindia Kannada

   ಬೆಂಗಳೂರು, ನವೆಂಬರ್ 12: ಅನಾರೋಗ್ಯದಿಂದ ಸೋಮವಾರ ಬೆಳಿಗ್ಗಿನ ಜಾವ ಕೊನೆಯುಸಿರೆಳೆದ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಲಿದೆ.

   ನವೆಂಬರ್ 13 ರಂದು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ. ನಾಳೆ ಬಸವನಗುಡಿಯ ನ್ಯಾಶ್ನಲ್ ಕಾಲೇಜು ಮೈದಾನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಹ ಆಗಮಿಸುವ ನಿರೀಕ್ಷೆಯಿದೆ.

   ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

   ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರು ಲಂಡನ್ನಿಗೆ ತೆರಳಿ ಕೆಲದಿನ ಚಿಕಿತ್ಸೆ ಪಡೆದಿದ್ದರು. ನಂತರ ಇತ್ತೀಚೆಗಷ್ಟೇ ಅವರನ್ನು ಬೆಂಗಳೂರಿಗೆ ಕರೆತಂದು ಚಾಮರಾಜಪೇಟೆಯ ಶಂಕರ ನ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

   ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ಸುಮಾರು 2 ಗಂಟೆಯ ಸಮಯಕ್ಕೆ ಇಹಲೋಕ ತ್ಯಜಿಸಿದರು.

   English summary
   Union minister Ananth Kumar's last rites will be taking place in crematorium in Chamrajpet in Bengaluru. The BJP leader passed away due to cancer this morning in Bengaluru
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X