• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವೇಗೌಡ-ಚಂದ್ರಬಾಬು ನಾಯ್ಡು ಭೇಟಿ: ಮೈತ್ರಿಯದ್ದೇ ಮಾತು

|

ಬೆಂಗಳೂರು, ನವೆಂಬರ್ 08: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರು ನಾಯ್ಡು ಅವರಿಗೆ ಸ್ವಾಗತ ಕೋರಿದ್ದಾರೆ.

ತೆಲಂಗಾಣ ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಸಮೀಪದಲ್ಲಿರುವ ಕಾರಣ ಕಾಂಗ್ರೆಸ್‌ ಜೊತೆ ಮೈತ್ರಿ ಮತ್ತು ತೆಲಂಗಾಣ ರಾಜ್ಯದಲ್ಲಿ ಟಿಡಿಪಿ ಪರ ಕುಮಾರಸ್ವಾಮಿ ಮತ್ತು ದೇವೇಗೌಡ ಅವರು ಟಿಡಿಪಿ ಪರ ಪ್ರಚಾರ ಮಾಡುವ ಬಗ್ಗೆ ಚರ್ಚಿಸಲು ಚಂದ್ರಬಾಬು ನಾಯ್ಡು ಅವರು ಆಗಮಿಸಿದ್ದಾರೆ.

ಚಂದ್ರಬಾಬು- ರಾಹುಲ್ ಒಟ್ಟಾಗಿ ಬಿಜೆಪಿ ವಿರುದ್ಧ ರಣ ಕಹಳೆ

ಸಂಜೆ 3:30 ರ ಸುಮಾರಿಗೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಬಾಬು ನಾಯ್ಡು ಅವರು ಪದ್ಮನಾಭ ನಗರದ ದೇವೇಗೌಡ ಅವರ ನಿವಾಸಕ್ಕೆ ಬಂದಿದ್ದಾರೆ.

ಎನ್‌ಡಿಎ ಜೊತೆ ಸಂಪೂರ್ಣವಾಗಿ ನಂಟು ಕಡಿದುಕೊಂಡು ಎದುರು-ಬದುರಾಗಿರುವ ಟಿಡಿಪಿಯು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದೆ. ಅಲ್ಲದೆ ಕಾಂಗ್ರೆಸ್‌ ಬೆಂಬಲದೊಂದಿಗೆ ತೃತೀಯ ರಂಗವನ್ನು ರಚಿಸುವ ಯೋಜನೆ ಚಂದ್ರಬಾಬು ನಾಯ್ಡು ಅವರಿಗಿದೆ ಎನ್ನಲಾಗಿದೆ. ಹಾಗಾಗಿ ಅವರು ದೇವೇಗೌಡ ಅವರನ್ನು ಭೇಟಿ ಆಗಿದ್ದಾರೆ.

ದೇವೇಗೌಡ-ಚಂದ್ರಬಾಬು ನಾಯ್ಡು ಭೇಟಿ: ಮೈತ್ರಿ ಬಗ್ಗೆ ಮಾತುಕತೆ

ಕೆಲವು ದಿನಗಳ ಹಿಂದೆಯಷ್ಟೆ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದರು. ಟಿಡಿಪಿಯು ಕಾಂಗ್ರೆಸ್‌ ಜೊತೆ ಕೈಜೋಡಿಸುತ್ತಿರುವುದಕ್ಕೆ ಆಂಧ್ರಪ್ರದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

English summary
Andhra Pradesh CM Chandrababu Naidu met HD Deve Gowda today in his residence in Padmanabha Nagar. CM Kumaraswamy also present to welcome Naidu. They were going to discuss about third front for upcoming Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X