ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಮತ್ತೆ ಧರಣಿ ಕುಳಿತ ಅಂಗನವಾಡಿ ಕಾರ್ಯಕರ್ತೆಯರು

|
Google Oneindia Kannada News

ಬೆಂಗಳೂರು, ಫೆಬ್ರವರಿ 05: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

'ನಿಮ್ಮ ಮನೆ ನಾಯಿಗಿಂತಲೂ ಅಂಗನವಾಡಿ ಕಾರ್ಯಕರ್ತೆಯರು ಕೀಳಾ?''ನಿಮ್ಮ ಮನೆ ನಾಯಿಗಿಂತಲೂ ಅಂಗನವಾಡಿ ಕಾರ್ಯಕರ್ತೆಯರು ಕೀಳಾ?'

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಸಿಟಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.

ಕನಿಷ್ಠ ವೇತನ ಬೇಕೇ ಬೇಕು: ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ ಕನಿಷ್ಠ ವೇತನ ಬೇಕೇ ಬೇಕು: ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ಕಾರ್ಮಿಕರ ಕಾಯಿದೆ ಜಾರಿ,ಸಮಾನ ಕೆಲಸಕ್ಕೆ ಸಮಾನ ವೇತನ, ಕನಿಷ್ಠ ವೇತನ, ಕನಿಷ್ಠ ಮಾಸಿಕ ಪಿಂಚಣಿ ಸೇರಿದಂತೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

Anganawadi workers protest in Freedom park, Bengaluru

ಫೆಬ್ರವರಿ 08 ರಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಮತ್ತೆ ಹೋರಾಟ : ವರಲಕ್ಷ್ಮೀ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಮತ್ತೆ ಹೋರಾಟ : ವರಲಕ್ಷ್ಮೀ

2017 ರ ಮಾರ್ಚ್ ತಿಂಗಳಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸತತ ನಾಲ್ಕು ದಿನಗಳ ಕಾಲ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರವನ್ನು ನಡುಗಿಸಿದ್ದರು. ನಂತರ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು.

ಆದರೆ ಇಂದಿಗೂ ತಮ್ಮ ಬೇಡಿಕೆಗಳು ಈಡೇರದ ಕಾರಣ ಇದೀಗ ಮತ್ತೊಮ್ಮೆ ಹೋರಾಟಕ್ಕೆ ಇಳಿದಿದ್ದಾರೆ.

English summary
Anganawadi workers protesting against government to fulfill their demands in Freedom park, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X