ಶ್ರೀರಾಮುಲು ಒಬ್ಬ ದುರ್ಬಲ ನಾಯಕ: ಅನಿಲ್ ಲಾಡ್ ವಾಗ್ದಾಳಿ
ಬೆಂಗಳೂರು, ಅಕ್ಟೋಬರ್ 11: ಶ್ರೀರಾಮುಲು ಒಬ್ಬ ದುರ್ಬಲ ನಾಯಕ, ಅವರು ಅಷ್ಟು ಪ್ರಬಲ ನಾಯಕ ಆಗಿದ್ದರೆ ಯಾಕೆ ಮೊಣಕಾಲ್ಮೂರಿಗೆ ಹೋಗಿದ್ದಾರೆ ಎಂದು ಬಳ್ಳಾರಿ ಮಾಜಿ ಶಾಸಕ ಅನಿಲ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭೆ ಉಪ ಚುನಾವಣೆಗೆ ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ಬಲ ಇದೆ ಎಂದು ಮಾತನಾಡುತ್ತಾರೆ, ಶ್ರೀರಾಮುಲು ಕಾರಣದಿಂದಲೇ ಬಳ್ಳಾರಿಯಲ್ಲಿ ಪದೇ ಪದೇ ಉಪ ಚುನಾವಣೆ ಎದುರಾಗುತ್ತಿದೆ ಎಂದು ಗುಡುಗಿದರು.
ಬಳ್ಳಾರಿ ನಮ್ಮ ಭದ್ರಕೋಟೆ ಎಂದು ಹೇಳುತ್ತಾರೆ ಆದರೆ ಏನು ಅಭಿವೃದ್ಧಿ ಮಾಡಿದ್ದಾರೆ, ಈ ಚುನಾವಣೆ ನಿಜಕ್ಕೂ ದುಬಾರಿಯಾಗಿದೆ, ಉಪ ಚುನಾವಣೆ ಬಳಿಕ 4 ತಿಂಗಳಲ್ಲೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ ಹೊಡೆತ ಬೀಳಲಿದೆ ಎಂದು ಹೇಳಿದರು.

ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ಒಂದೆರೆಡು ದಿನಗಳಲ್ಲಿ ಎಲ್ಲರೂ ಸೇರಿ ಆಯ್ಕೆ ಮಾಡುತ್ತೇವೆ, ಡಿಕೆ ಶಿವಕುಮಾರ್ ಅವರು ಪ್ರಭಾವಿ ನಾಯು, ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ಮಾಡಿರುವುದಕ್ಕೆ ಯಾವುದೇ ಬೇಸರವಿಲ್ಲ ಎಂದರು.
ಬಳ್ಳಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದಾರೆ ನಾವೇ ಕಣಕ್ಕಿಳಿಯುತ್ತಿದ್ದೆವು, ಆದರೆ ಅದು ಎಸ್‌ಟಿಗೆ ಮೀಸಲು ಕ್ಷೇತ್ರವಾಗಿದೆ. ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನುವುದು ಸಹಜ, ನಾವೇನು ಠೇವಣಿ ಕಳೆದುಕೊಂಡಿಲ್ಲ, ಬಳ್ಳಾರಿ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಮಗೆ ಬಹುಮತ ಇಲ್ಲದ ಕಾರಣ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ, ಹಾಗಾಗಿ ಒಟ್ಟಿಗೆ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications