ಬೀದಿ ನಾಯಿಗಳಿಗೆ ಅನ್ನ ಹಾಕಿದರೆ ಚಪ್ಪಲಿ ಏಟು ಬೀಳುತ್ತೆ ಹುಷಾರ್ !
ಬೆಂಗಳೂರು, ಮಾರ್ಚ್ 06 : ಬೀದಿ ನಾಯಿಗಳಿಗೆ ಅನ್ನ ಹಾಕಿದರೆ ಚಪ್ಪಲಿಯಲ್ಲಿ ಹೊಡೆಯುವ ಮಂದಿ ಬೆಂಗಳೂರಿನಲ್ಲಿದ್ದಾರೆ. ಹೌದು, ಇಂತಹ ಮನ ಕಲುಕುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದ ಮಹಿಳಾ ಟೆಕ್ಕಿ ಜತೆ ಜಗಳ ತೆಗೆದ ಸ್ಥಳೀಯರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮಾತ್ರವಲ್ಲ ಸಾರ್ವಜನಿಕವಾಗಿ ಯುವಕನೊಬ್ಬ ಚಪ್ಪಲಿಯಿಂದ ಬೆನ್ನಿಗೆ ಎಸೆದು ವಿಕೃತ ಮೆರೆದಿದ್ದಾನೆ. ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ನಾಗರಬಾವಿಯ ವಿನಾಯಕ ಲೇಔಟ್ ಸತ್ಯಜಿತ್ ಎಂಬುವರ ಪತ್ನಿ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ನಾಯಿಯನ್ನು ಸಾಕಿದ್ದರು. ಪ್ರತಿ ನಿತ್ಯ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಳು. ಈ ನಾಯಿ ನೋಡಿ ಬೊಗಳುತ್ತಿದ್ದ ಬೀದಿ ನಾಯಿಗಳಿಗೆ ಪ್ರತಿ ನಿತ್ಯ ಆಹಾರ ಕೊಟ್ಟು ಸಲಹುತ್ತಿದ್ದಳು. ಇದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಮಹಿಳಾ ಟೆಕ್ಕಿ ಅನ್ನ ಹಾಕುವ ಕಾರಣದಿಂದಲೇ ಬೀದಿ ನಾಯಿಗಳು ರಾತ್ರಿ ವೇಳೆ ಬೈಕ್ ಸವಾರರ ಮೇಲೆ ಎರಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಈ ಬೀದಿಯಲ್ಲಿ ಓಡಾಡದಂತೆ ಮಹಿಳಾ ಟೆಕ್ಕಿಗೆ ಎಚ್ಚರಿಕೆ ನೀಡಿದ್ದರು.

ಇದಕ್ಕೆ ತಲೆ ಕೆಡಿಸಿಕೊಳ್ಳದ ಮಹಿಳಾ ಟೆಕ್ಕಿ ಶುಕ್ರವಾರ ಸಂಜೆ ಎಂದಿನಂತೆ ಬೀದಿ ನಾಯಿಗಳಿಗೆ ಅನ್ನ ಹಾಕಿದ್ದಾರೆ. ಈ ವೇಳೆ ಜಮಾಯಿಸಿದ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಯುವಕನೊಬ್ಬ ಮಹಿಳಾ ಟೆಕ್ಕಿಯ ಬೆನ್ನಿಗೆ ಚಪ್ಪಲಿಯಿಂದ ಹೊಡೆದಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳಾ ಟೆಕ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಮಹಿಳೆಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications