ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ ನಿವಾಸಿಗಳಲ್ಲಿ ಕೊರೊನಾ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಹತ್ತು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ಇದೇ ಫೆಬ್ರವರಿ 13ರಂದು ಕಾವಲ್‌ಬೈರ ಸಂದ್ರದ ಮಂಜುಶ್ರೀ ನರ್ಸಿಂಗ್ ಕಾಲೇಜ್‌ನ 210 ವಿದ್ಯಾರ್ಥಿಗಳ ಪೈಕಿ ಕೇರಳ ಮೂಲದ 40 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಆನಂತರ ಬೊಮ್ಮನಹಳ್ಳಿ ವಲಯದ ಅಪಾರ್ಟ್‌ಮೆಂಟ್‌ ಒಂದರಲ್ಲಿ 56 ನಿವಾಸಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಬೆಳ್ಳಂದೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿನ ಹತ್ತು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಹುಷಾರ್; ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಆಯುಕ್ತಹುಷಾರ್; ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಆಯುಕ್ತ

ಈ ಅಪಾರ್ಟ್‌ಮೆಂಟ್‌ ನಲ್ಲಿ ಸೋಂಕು ದೃಢಪಟ್ಟಿರುವವರಲ್ಲಿ ಬಹುಪಾಲು ಮಂದಿ 55 ವರ್ಷ ಮೇಲ್ಪಟ್ಟವರಾಗಿದ್ದಾರೆ ಹಾಗೂ ಕೊರೊನಾ ಗುಣಲಕ್ಷಣಗಳು ಕಂಡುಬಂದ ನಂತರ ಇವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಸೋಂಕು ದೃಢಪಟ್ಟಿದೆ. "ಕೊರೊನಾ ಸೋಂಕಿನ ನಿಯಂತ್ರಣದಲ್ಲಿ ನಾವು ತೊಡಗಿಕೊಂಡಿದ್ದೇವೆ. ಪರಿಸ್ಥಿತಿ ನಿಭಾಯಿಸಲು ಸರ್ವಸನ್ನದ್ಧವಾಗಿದ್ದೇವೆ" ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಆರ್ ತಿಳಿಸಿದ್ದಾರೆ.

Another Bengaluru Apartment Reports 10 Positive Case

ಅಪಾರ್ಟ್‌ಮೆಂಟ್‌ನ ಆರು ಬ್ಲಾಕ್‌ಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಇವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಮಹದೇವಪುರ ಆರೋಗ್ಯಾಧಿಕಾರಿ ಮೊಬೈಲ್ ಟೀಮ್‌ಗಳನ್ನು ನಿಯೋಜಿಸಿದ್ದು, 500 ಆರ್‌ಟಿಪಿಸಿಆರ್ ಮಾದರಿಗಳನ್ನು ಪರೀಕ್ಷೆಗೆ ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.

Recommended Video

ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ರೈತರು-ಇಂದಿನಿಂದ 27ರವರೆಗೆ ರೈತರಿಂದ ಸಾಲು-ಸಾಲು ಕಾರ್ಯಕ್ರಮ | Oneindia Kannada

ಸೋಂಕು ಪತ್ತೆಯಾದ ನಂತರ ಅಪಾರ್ಟ್‌ಮೆಂಟ್‌ಗಳನ್ನು ಸ್ಯಾನಿಟೈಸ್ ಮಾಡುತ್ತಿದ್ದೇವೆ. ನಾಲ್ಕು ವೈದ್ಯರನ್ನೊಳಗೊಂಡಂತೆ ವಿಶೇಷ ತಂಡ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

English summary
Another apartment in bellandur of bengaluru reports ten positive cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X