Namma Metro: ಲೈಂಗಿಕ ಕಿರುಕುಳ ಹೆಚ್ಚಳ, ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಮತ್ತೊಂದು ಬೋಗಿ

ಬೆಂಗಳೂರು, ಜನವರಿ 12: ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಬೋಗಿ ಮೀಸಲಿಡಲು ಚಿಂತನೆ ನಡೆಸಿದೆ. ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಸುರಕ್ಷಿತವಾದ ಹಾಗೂ ಆರಾಮದಾಯಕ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಸಂಸ್ಥೆ ಈ ನಿರ್ಧಾರಕ್ಕೆ ಮುಂದಾಗಿದೆ.

ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ಹಾಗೂ ವೇಗವಾಗಿ ಸಂಚರಿಸಲು ಜನ ನಮ್ಮ ಮೆಟ್ರೋವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದು, ದಿನೇ ದಿನೇ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಜೊತೆಗೆ ಮಹಿಳಾ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಎಲ್ಲಾ ಬೋಗಿಗಳು ಜನದಟ್ಟಣೆಯ ನಡುವೆ ಮಹಿಳೆಯರು ಸಂಚರಿಸುತ್ತಿದ್ದಾರೆ.

Another Coach Reserved For Women In Our Namma Metro Train

ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಕಾಮುಕರು ನಮ್ಮ ಮೆಟ್ರೋದ ಸಂಚಾರದ ವೇಳೆಯೇ ಕಿರುಕುಳ ನೀಡುತ್ತಿದ್ದಾರೆ. ಜನದಟ್ಟಣೆಯ ನಡುವೆ ಮಹಿಳೆಯರ ಮೇಲೆ ಬೀಳುವುದು, ಖಾಸಗಿ ಅಂಗಗಳನ್ನು ಮುಟ್ಟುವುದು ಸೇರಿದಂತೆ ವಿವಿಧ ರೀತಿಯಲ್ಲಿ ಲೈಂಗಿಕ ದೌರ್ಜನ್ಯವನ್ನು ಎಸಗುತ್ತಿದ್ದಾರೆ. ಇಂತಹ ಅನೇಕ ಘಟನೆಗಳು ಇತ್ತೀಚಿಗೆ ಬೆಳಕಿಗೆ ಬರುತ್ತಿದೆ.

2024ರ ಹೊಸ ವರ್ಷದ ಆರಂಭ ದಿನ ನಮ್ಮ ಮೆಟ್ರೋದಲ್ಲಿ ಜನದಟ್ಟಣೆಯಿಂದ ಸಂದರ್ಭದಲ್ಲಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯ ಖಾಸಗಿ ಅಂಗವನ್ನು ಸ್ವರ್ಶಿಸಿ ಕಿರುಕುಳ ನೀಡಿದ್ದ. ಈ ವೇಳೆ ಯುವತಿ ಅಲ್ಲೇಯಿದ್ದ ನಮ್ಮ ಮೆಟ್ರೋದ ಭದ್ರತಾ ವಿಭಾಗದ ಸಿಬ್ಬಂದಿಗೆ ತಿಳಿಸಿ ಸಾರ್ವಜನಿಕರ ಮುಂದೆ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಬಳಿಕ ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಪೊಲೀಸರ ಮುಂದೆ ವ್ಯಕ್ತಿ ಇನ್ನೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದ ಘಟನೆ ನಡೆದಿತ್ತು.

Another Coach Reserved For Women In Our Namma Metro Train

ಮದ್ಯಪಾನ ಮಾಡಿ ನಮ್ಮ ಮೆಟ್ರೋದಲ್ಲಿ ಸಂಚರಿಸುವಂತಿಲ್ಲ ಎನ್ನುವ ನಿಯಮವಿದೆ ಆದರೆ ಇತ್ತೀಚಿಗೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಯುವತಿಯ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಬೋಗಿಯಲ್ಲಿ ಕುಳಿತಿದ್ದ ವ್ಯಕ್ತಿಯು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಯುವತಿ ಇಳಿಯುತ್ತಿದ್ದಂತೆ ಅಸಭ್ಯವಾಗಿ ವರ್ತನೆ ಮಾಡಿದ್ದ.

ಹಿಂದಿನಿಂದ ಯುವತಿಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ನಂತರ ಆಕೆಯನ್ನೇ ನೋಡುತ್ತ ನಿಂತು, ಬಳಿಕ ಅಲ್ಲಿಂದ ಹೊರಟಿದ್ದ. ಇದರಿಂದ ಭಯಗೊಂಡಿದ್ದ ಯುವತಿಯು ಕೂಡಲೇ ಮೆಟ್ರೋದಿಂದ ಇಳಿದು ಸೆಕ್ಯೂರಿಟಿ ಸಿಬ್ಬಂದಿಗೆ ವಿಚಾರವನ್ನು ತಿಳಿಸಿದ್ದಳು. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಇಂತಹ ಅನೇಕ ಘಟನೆಗಳು ಇತ್ತೀಚಿಗೆ ನಮ್ಮ ಮೆಟ್ರೋದಲ್ಲಿ ಹೆಚ್ಚುತ್ತಿದೆ. ಹೀಗಾಗಿ ಸದ್ಯ ಮಹಿಳೆಯರ ಸುರಕ್ಷತೆಗಾಗಿ ಈಗಿರುವ ಬೋಗಿ ಜೊತೆಗೆ ಮತ್ತೊಂದು ಬೋಗಿಯನ್ನು ಮಹಿಳೆಯರಿಗಾಗಿ ಮೀಸಲಿಡುವಂತೆ ಬಿಎಂಆರ್‌ಸಿಎಲ್‌ಗೆ ಅನೇಕ ಬೇಡಿಕೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಸ್ಥೆ ಶೀಘ್ರದಲ್ಲೇ ಮಹಿಳೆಯರಿಗೆ ಒಟ್ಟಾರೆ ಎರಡು ಬೋಗಿ ಮೀಸಲಿಡಲು ಚಿಂತನೆ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+