ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ಇಂದು ಮತ್ತು ನಾಳೆ ಸಾರ್ವಜನಿಕರಿಗೆ ವೈಮಾನಿಕ ಪ್ರದರ್ಶನ ನೋಡಲು ಅವಕಾಶ ಮಾಡಿಕೊಡಲಾಗಿತ್ತು. ಈ ಮಧ್ಯೆ ಸಾವಿರಾರು ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು. ಅವಘಡದಲ್ಲಿ 300ಕ್ಕೂ ಹೆಚ್ಚು ಕಾರುಗಳು ಅಗ್ನಿಗಾಹುತಿಯಾಗಿವೆ.

ಏರೋ ಇಂಡಿಯಾ 2019 : ಬಾನಂಗಳದಲ್ಲಿ ಉಕ್ಕಿನ ಹಕ್ಕಿಗಳ ಶಕ್ತಿ ಪ್ರದರ್ಶನ

Another Fire breaks out in aero India show

ಗೇಟ್ ನಂಬರ್ 5ರ ಬಳಿ ವಾಹನ ನಿಲುಗಡೆ ಮಾಡಿದ್ದ ಜಾಗದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು ಸ್ಥಳಗ್ಗೆ 10 ಅಗ್ನಿಶಾಮಕ ವಾಹನಗಳು ಆಗಮಿಸಿತ್ತು. ಬೆಂಕಿ ಹತ್ತಿದ್ದ ಸಂದರ್ಭದಲ್ಲಿ ಸುಮಾರು ಕಾರು ಸ್ಫೋಟಗೊಂಡಿವೆ.

Viral Video: ಏರೋ ಇಂಡಿಯಾದಲ್ಲಿ ಧಗಧಗಿಸಿದ ಕಾರುಗಳುViral Video: ಏರೋ ಇಂಡಿಯಾದಲ್ಲಿ ಧಗಧಗಿಸಿದ ಕಾರುಗಳು

ಆದರೆ ಮೊದಲು ಬೆಂಕಿ ಕಾಣಿಸಿಕೊಳ್ಳಲು ಕಾರಣವೇನೆಂದು ತಿಳಿದಿರಲಿಲ್ಲ ಆದರೆ ಅಲ್ಲಿಯೇ ಇದ್ದ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದ ಕಾರಣ ಹೊಗೆ ಆವರಿಸಿಕೊಂಡಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

Another Fire breaks out in aero India show

ಫೆಬ್ರವರಿ 19ರಂದು ಯಲಹಂಕದ ವಾಯುನೆಲೆಯಲ್ಲಿ ತಾಲೀಮಿನಲ್ಲಿ ತೊಡಗಿದ್ದ ಸೂರ್ಯ ಕಿರಣ ಯುದ್ಧ ವಿಮಾನದ ಪೈಲಟ್ ವಿಮಾನ ಡಿಕ್ಕಿಯಲ್ಲಿ ಮೃತಪಟ್ಟಿದ್ದರು.

ಆಕಸ್ಮಿಕ ಬೆಂಕಿ ಹಿನ್ನೆಲೆ ಏರೋ ಶೋ ತಾತ್ಕಾಲಿಕ ಸ್ಥಗಿತಆಕಸ್ಮಿಕ ಬೆಂಕಿ ಹಿನ್ನೆಲೆ ಏರೋ ಶೋ ತಾತ್ಕಾಲಿಕ ಸ್ಥಗಿತ

Another Fire breaks out in aero India show

ಈ ಕಹಿ ಘಟನೆ ಮಾಸುವ ಮುನ್ನವೇ ಏರೋ ಇಂಡಿಯಾ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವು ನಿಮಿಷಗಳ ಕಾಲ ಆತಂಕ ಸೃಷ್ಟಿಮಾಡಿತ್ತು.

Another Fire breaks out in aero India show

ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಳಗ್ಗೆಯ ಒಂದು ಹಂತದ ವೈಮಾನಿಕ ಪ್ರದರ್ಶನಕ್ಕೆ ತೆರೆ ಬಿದ್ದಿದೆ, ಮಧ್ಯಾಹ್ನದ ಪ್ರದರ್ಶನ 2 ಗಂಟೆಯ ಬಳಿಕ ಆರಂಭವಾಗಲಿದೆ.

ಏರೋ ಇಂಡಿಯಾ : ಸುಟ್ಟು ಬಿಸಾಕಿದ ಸಿಗರೇಟು ಅನಾಹುತ ಮಾಡಿತೆ?ಏರೋ ಇಂಡಿಯಾ : ಸುಟ್ಟು ಬಿಸಾಕಿದ ಸಿಗರೇಟು ಅನಾಹುತ ಮಾಡಿತೆ?

ಸಾವಿರಗಟ್ಟಲೆ ವಾಹನಗಳ ನಿಲ್ಲಿಸಿದ್ದ ಜಾಗದಲ್ಲಿ ದಟ್ಟ ಹೊಗೆ, ಬೆಂಕಿ ಆವರಿಸಿಕೊಂಡಿತ್ತು. ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

English summary
Another Fire breaks out in aero India show near Yelahanka Bengaluru on Saturday February 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X