ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಶಾಲೆಯಲ್ಲಿ ಮತ್ತೊಂದು ಅತ್ಯಾಚಾರ?

By Prasad
|
Google Oneindia Kannada News

ಬೆಂಗಳೂರು, ಅ. 30 : ಸುರಕ್ಷಿತವಾಗಿದ್ದಾರೆಂಬ ಭಾವನೆಯಿಂದ ಮಕ್ಕಳನ್ನು ಓದಲು ಶಾಲೆಗೆ ಕಳುಹಿಸುವ ಪಾಲಕರು ಕಳವಳಕ್ಕೀಡಾಗುವಂಥ, ಶಿಕ್ಷಣ ಇಲಾಖೆಯೇ ಮತ್ತೆ ತಲೆತಗ್ಗಿಸುವಂಥ ಮತ್ತೊಂದು ಘಟನೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಡೆದಿದೆ.

6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 40 ವರ್ಷದ ಶಿಕ್ಷಕನನ್ನು ಪೊಲೀಸರು ಗುರುವಾರ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಘಟನೆ ಮಂಗಳವಾರವೇ ನಡೆದಿದ್ದು, ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇರೆಗೆ ಶಿಕ್ಷಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಪ್ರತಿಷ್ಠಿತ ಶಾಲೆಯ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡು ಈ ಘಟನೆ ಕುರಿತಂತೆ ತೀವ್ರತರವಾಗಿ ವಿಚಾರಣೆ ನಡೆಸುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಖಚಿತಪಡಿಸಿದ್ದಾರೆ. ಇಂದಿರಾನಗರದ ಕೇಂಬ್ರಿಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದ್ದು, ಶಿಕ್ಷಕನ ಗುರುತು ಬಹಿರಂಗಪಡಿಸಲು ಕೂಡ ಪೊಲೀಸರು ನಿರಾಕರಿಸಿದ್ದಾರೆ.

Another rape reported in school in Bangalore

ಆರೋಪಿಯನ್ನು ತಮಗೆ ಒಪ್ಪಿಸಲು ಪೋಷಕರ ಒತ್ತಾಯ : ಈ ಘಟನೆಯಿಂದ ರೊಚ್ಚಿಗೆದ್ದಿರುವ ಪೋಷಕರು ಜೀವನ ಭೀಮಾ ನಗರ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿ, ಆರೋಪಿ ಶಿಕ್ಷಕನನ್ನು ತಮ್ಮ ಸುಪರ್ದಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸತೀಶ್ ಅವರು ಪೋಷಕರು ಮತ್ತು ಸಾರ್ವಜನಿಕರನ್ನು ಸಮಾಧಾನಪಡಿಸಿದರು.

ಜಾಲಹಳ್ಳಿಯಲ್ಲಿರುವ ಆರ್ಕಿಡ್ಸ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಕೆಲವೇ ದಿನಗಳೊಳಗೆ ಮತ್ತೊಂದು ಘಟನೆ ನಡೆದಿರುವುದು ಪೋಷಕರನ್ನು ಮತ್ತು ಸರಕಾರವನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. [ಆರ್ಕಿಡ್ಸ್ ರೇಪ್ ಆರೋಪಿ ಗುಂಡಣ್ಣ]

ಒಂದೆಡೆ ಪೋಷಕರು ತಮ್ಮ ಮಕ್ಕಳ ರಕ್ಷಣೆಗಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಒಂದರ ಮೇಲೊಂದರಂತೆ ಮಕ್ಕಳ ಮೇಲೆ ಅಸಹ್ಯಕರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಕೆಲವೇ ತಿಂಗಳಲ್ಲಿ, ಮಕ್ಕಳ ಮೇಲೆ ನಡೆದಿರುವ ನಾಲ್ಕನೇ ಲೈಂಗಿಕ ದೌರ್ಜನ್ಯ ಇದಾಗಿದೆ. [8 ವರ್ಷದ ಬಾಲಕಿ ಮೇಲೆ ದೌರ್ಜನ್ಯ]

ಮಕ್ಕಳ ಸುರಕ್ಷತೆಯ ಜವಾಬ್ದಾರಿಯನ್ನು ಸರಕಾರದ ಮೇಲೆ ಹೊರಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ದಿನವೇ ಈ ಘಟನೆ ನಡೆದಿದೆ. ನ್ಯಾಯಮೂರ್ತಿ ವೇಣುಗೋಪಾಲ ಗೌಡ ಅವರು, ಮಕ್ಕಳ ಸುರಕ್ಷತೆಗಾಗಿ ಶಾಲೆಗಳು ತೆಗೆದುಕೊಳ್ಳುವ ಕ್ರಮಗಳ ಮೇಲ್ವಿಚಾರಣೆ ಮಾಡಬೇಕೆಂದು ಆದೇಶ ನೀಡಿದ್ದರು. [ಶಾಲಾ ಮಕ್ಕಳ ಸುರಕ್ಷತೆಗೆ ಮಾರ್ಗಸೂಚಿ]

ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆ ಯಾವುದೇ ರೀತಿಯ ಗಂಭೀರವಾದ ಪ್ರಯತ್ನವನ್ನು ಮಾಡುತ್ತಿಲ್ಲ ಮತ್ತು ಸರಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಇದಕ್ಕೆ ಪೂರಕವಾಗಿಲ್ಲ ಎಂದು ನ್ಯಾಯಮೂರ್ತಿ ವೇಣುಗೋಪಾಲ ಗೌಡ ಅವರು ಸರಕಾರವನ್ನು ಜಾಲಾಡಿದ್ದರು.

ನಾಲ್ಕನೇ ಘಟನೆ : ಮೊದಲು ವಿಬ್ ಗಯಾರ್ ಶಾಲೆಯಲ್ಲಿ ಆರು ವರ್ಷದ ಮಗುವಿನ ಮೇಲೆ ದೈಹಿಕ ಶಿಕ್ಷಕನಿಂದ ದೌರ್ಜನ್ಯ ನಡೆದಿತ್ತು. ನಂತರ, 63 ವರ್ಷದ ವೃದ್ಧ ಎಂಟು ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ವರದಿಯಾಗಿತ್ತು. ಕೆಲ ದಿನಗಳ ಹಿಂದೆ ಆರ್ಕಿಡ್ಸ್ ಶಾಲೆಯಲ್ಲಿ ಮೂರು ವರ್ಷದ ಕಂದಮ್ಮ ಶಿಕ್ಷಕೇತರ ಸಿಬ್ಬಂದಿಯಿಂದ ದೌರ್ಜನ್ಯಕ್ಕೆ ಒಳಗಾಗಿತ್ತು. [ವಿಬ್ ಗಯಾರ್ : ಪೋಷಕರ ಪ್ರತಿಭಟನೆ]

English summary
One more incident of rape in school kid is reported in Bangalore. A 40-year-old teacher has been detained by police for inquiry. Mother of 6-year-old has alleged sexual harassment on her child.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X