ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

MLC ಪುಟ್ಟಣ್ಣ ಉಚ್ಚಾಟನೆ, ಮತ್ತಷ್ಟು ಸದಸ್ಯರು JDS ತೊರೆವ ಸಾಧ್ಯತೆ?

|
Google Oneindia Kannada News

ಬೆಂಗಳೂರು, ನವೆಂಬರ್ 06: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜನತಾದಳದಿಂದ ಉಚ್ಚಾಟಿಸಲಾಗಿದೆ. ಈ ಬೆಳವಣಿಗೆಯ ನಂತರ ಮತ್ತಷ್ಟು ಜೆಡಿಎಸ್ ಸದಸ್ಯರು ಮತ್ತು ಶಾಸಕರು ಪಕ್ಷ ಬಿಡುವ ನಿರ್ಧಾರ ಮಾಡಿದ್ದಾರೆ ಎಂದು ವದಂತಿ ಹಬ್ಬಿದೆ.

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ನಿಂದ ಪುಟ್ಟಣ್ಣ ಉಚ್ಚಾಟನೆಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ನಿಂದ ಪುಟ್ಟಣ್ಣ ಉಚ್ಚಾಟನೆ

ಜೆಡಿಎಸ್ ಸುಪ್ರಿಮೋ ಎಚ್.ಡಿ.ದೇವೇಗೌಡ ಅವರು ಭಿನ್ನಾಭಿಪ್ರಾಯ ಶಮನಕ್ಕಾಗಿ ನವೆಂಬರ್ 12 ರಂದು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಈ ಮೊದಲೇ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದರು. ಅವರನ್ನು ಈ ಬಾರಿ ಬಿಜೆಪಿ ಶಿಕ್ಷಕರ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ ಎಂಬ ಮಾತು ಕೇಳಿಬರುತ್ತಿದೆ.

ಪಕ್ಷ ವಿರೋಧಿ ಚಟುವಟಿಕೆ

ಪಕ್ಷ ವಿರೋಧಿ ಚಟುವಟಿಕೆ

ಉಚ್ಚಾಟನೆ ಕುರಿತು ಪುಟ್ಟಣ್ಣ ಅವರಿಗೆ ಪತ್ರ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, "ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ವಿಧಾನ ಪರಿಷತ್ ಸದಸ್ಯ ಪುಟ್ಟ ಆದ ತಮ್ಮನ್ನು ಈ ಕೂಡಲೇ ಜಾರಿಗೆ ಬರುವಂತೆ ಜನತಾದಳ ಪಕ್ಷದಿಂದ ಉಚ್ಚಾಟಿಸಲಾಗಿದೆ" ಎಂದಿದ್ದಾರೆ.

ಮೂರು ಬಾರಿ ಗೆದ್ದಿದ್ದ ಪುಟ್ಟಣ್ಣ

ಮೂರು ಬಾರಿ ಗೆದ್ದಿದ್ದ ಪುಟ್ಟಣ್ಣ

ಮೂರು ಬಾರಿ ಜೆಡಿಎಸ್ ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ, ಇತ್ತೀಚೆಗಷ್ಟೇ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದರು. ತಾವು ಮೂರು ಬಾರಿ ಗೆದ್ದರೂ ತಮ್ಮನ್ನು ಮೂಲೆಗುಂಪು ಮಾಡಿ, ಬೇರೊಬ್ಬರನ್ನು ಆ ಸ್ಥಾನಕ್ಕೆ ಆರಿಸುವ ಹುನ್ನಾರ ನಡೆಯುತ್ತಿದೆ ಎಂಬುದು ಅವರ ಆರೋಪವಾಗಿತ್ತು.

ಪುಟ್ಟಣ್ಣ ಬಿಜೆಪಿಗೆ; ಎಂಎಲ್‌ಸಿಗೆ ತಿರುಗೇಟು ನೀಡಿದ ಜೆಡಿಎಸ್!ಪುಟ್ಟಣ್ಣ ಬಿಜೆಪಿಗೆ; ಎಂಎಲ್‌ಸಿಗೆ ತಿರುಗೇಟು ನೀಡಿದ ಜೆಡಿಎಸ್!

ಬಿಜೆಪಿಯಿಂದ ಸ್ಪರ್ಧೆ?

ಬಿಜೆಪಿಯಿಂದ ಸ್ಪರ್ಧೆ?

ಜೂನ್ 2020 ರಲ್ಲಿ ನಡೆಯಲಿರುವ ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಅಭ್ಯರ್ಥಿ ಮಾಡುವುದಿಲ್ಲ, ಮತ್ತು ಬೇರೊಬ್ಬರನ್ನು ಈ ಸ್ಥಾನಕ್ಕೆ ಆರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪುಟ್ಟಣ್ಣ ಪಕ್ಷ ಬಿಡುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನಲಾಗಿದೆ

ರಾಜಕೀಯ ವಲಯದಲ್ಲಿ ಗೊಂದಲ

ರಾಜಕೀಯ ವಲಯದಲ್ಲಿ ಗೊಂದಲ

ಈಗಾಗಲೇ ಜೆಡಿಎಸ್ ನ ಕೆಲವು ವಿಧಾನಪರಿಷತ್ ಸದಸ್ಯರು ಮತ್ತು ಕೆಲವು ಶಾಸಕರು ಸಹ ಪಕ್ಷ ಬಿಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಈ ಎಲ್ಲ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಲು ನವೆಂಬರ್ 12 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಉಪಚುನಾವಣೆಯ ನಂತರ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಂಭವವಿದ್ದು, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಎಚ್.ಡಿ.ದೇವೇಗೌಡರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಪಕ್ಷ ಬಿಟ್ಟು ಬಿಜೆಪಿಯತ್ತ ಮುಖ ಮಾಡಲು ಯೋಚಿಸುತ್ತಿರುವ ಶಾಸಕರ ನಡೆ, ಮತ್ತು ಬಿಜೆಪಿ ಬೆಂಬಲಕ್ಕೇ ನಿಲ್ಲಲು ಮುಂದಾಗಿರುವ ಅಧ್ಯಕ್ಷರ ನಡೆ ರಾಜಕೀಯ ವಲಯದಲ್ಲಿ ಗೊಂದಲ ಮೂಡಿಸಿದೆ!

English summary
Anti-Party Activities: JDS Expels MLC Puttanna,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X