• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಹುಲ್ ಗಾಂಧಿ ನೂರು ಸುಳ್ಳು ಹೇಳಿದರೂ, ಸತ್ಯಕ್ಕೇ ಜಯ: ಬಿಜೆಪಿ

|

ಬೆಂಗಳೂರು, ಡಿಸೆಂಬರ್ 17: ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ 34 ವರ್ಷದ ಬಳಿಕ ಸಿಖ್ ಧರ್ಮೀಯರಿಗೆ ನ್ಯಾಯ ಸಿಕ್ಕಿದೆ. ಕಾಂಗ್ರೆಸ್ ಮುಖಂಡರಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1984 ರ ಸಿಖ್ ವಿರೋಧಿ ದಂಗೆಯಲ್ಲಿ ಪ್ರಮುಖವಾಗಿ ಪಾಲ್ಗೊಂಡಿದ್ದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ಆಗಿದೆ. ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಸತ್ಯ ಏನು ಅನ್ನೋದು ಇವತ್ತು ಇಡೀ ದೇಶಕ್ಕೆ ಗೊತ್ತಾಗಿದೆ ಎಂದರು.

'ನಮ್ಮ ತಾಯಿಯ ಹತ್ಯೆ ಮಾಡಲಾಗಿದೆ. ಸರ್ದಾರರನ್ನು ಕೊಲ್ಲಿರಿ'!

ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಬಹಳ ಮಹತ್ವ ಪಡೆದಿದೆ. ರಾಹುಲ್ ಗಾಂಧಿ ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಸಿಖ್ ದಂಗೆಯಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಒಪ್ಪಿಕೊಳ್ಳುತ್ತಾರೆ. ಆದರೆ ಸೋನಿಯಾ ಗಾಂಧಿ ಈ ಬಗ್ಗೆ‌ ತುಟಿಬಿಚ್ಚುವುದಿಲ್ಲ. 34 ವರ್ಷದ ನಂತರ ಸಿಖ್ ಧರ್ಮಿಯರಿಗರ ನ್ಯಾಯ ಸಿಕ್ಕಿದೆ. ಸತ್ಯ ಮೇವ ಜಯತೇ. ಇನ್ನಾದರೂ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

ರಫೇಲ್ ಒಪ್ಪಂದದ ಬಗ್ಗೆ ಕಾಂಗ್ರೆಸ್ ಹಸಿ ಸುಳ್ಳು ಹೇಳುತ್ತಿದೆ. ಈ ಒಪ್ಪಂದದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ರಾಹುಲ್ ಗಾಂಧಿಗೆ ಜನರ ಬಳಿ ಹೋಗಲು ಮುಖವಿಲ್ಲ. ರಾಹುಲ್ ನೂರು ಸುಳ್ಳು ಹೇಳಿದರೂ, ಎಂದಿಗೂ ಸತ್ಯಕ್ಕೇ ಜಯ ಸಿಗುತ್ತದೆ ಎಂದು ಹೇಳಿದರು.

ಸಿಖ್ ಹತ್ಯಾಕಾಂಡ : ಒಬ್ಬರಿಗೆ ಗಲ್ಲು, ಮತ್ತೊಬ್ಬರಿಗೆ ಜೀವಾವಧಿ ಶಿಕ್ಷೆ

ಕಮಲ್ ನಾಥ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಆದರೆ ಸಿಖ್ ವಿರೋಧಿ ದಂಗೆಯ ಕುರಿತು ತನಿಖೆ ನಡೆಸಿದ ನಾನಾವತಿ ಆಯೋಗದ ವರದಿಯಲ್ಲಿ ಕಮಲ್ ನಾಥ ಅವರ ಹೆಸರೂ ಮುಂಚೂಣಿಯಲ್ಲಿದೆ. ಇದು ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲದ ಸಂಗತಿಯೇನಲ್ಲ. ಆದರೂ ರಾಹುಲ್ ಗಾಂಧಿ ಸುಮ್ಮನೆ ಕುಳಿತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

English summary
BJP Spokesperson Sambit Patra on Monday slams Congress President Rahul Gandhi and demanded his resignation after Supreme Court announced the verdict of 1984 Anti Sikh riot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X