• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೆಡ್ಡಿ ಕೇಸ್: ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಆಂಧ್ರ ಸಿಎಂ

|
   Janardhana Reddy Case : ಬೆಂಗಳೂರಿನಲ್ಲಿ ಗುರುವಾರ ಎಚ್ ಡಿ ಕೆನ ಭೇಟಿ ಮಾಡಲಿದ್ದಾರೆ ಚಂದ್ರಬಾಬು ನಾಯ್ಡು

   ಹೈದರಾಬಾದ್, ನವೆಂಬರ್ 7: ಆಂಬಿಡೆಂಟ್ ಕಂಪನಿ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತನೆನಿಸಿರುವ ಅಲಿಖಾನ್ ಗಾಗಿ ಹೈದರಾಬಾದ್‌ನಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

   ಈ ವಿಷಯ ಕುರಿತು ಚರ್ಚಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಕರ್ನಾಟಕದ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿದೆ. ಸದ್ಯ ರೆಡ್ಡಿ ಹೈದರಾಬಾದ್​ನಲ್ಲಿ ಅಡಗಿರುವ ಶಂಕೆ ಇದ್ದು, ಅಲ್ಲಿಯೂ ಹುಡುಕಾಟ ಆರಂಭಗೊಂಡಿದೆ.

   ಎಂಇಪಿಯ ನೌಹೀರಾ ಶೇಖ್‌ರಿಂದ ಕೋಟ್ಯಂತರ ಹಣ ಪಡೆದಿದ್ದ ರೆಡ್ಡಿ

   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಆಯುಕ್ತರು ಮಾಧ್ಯಮದವರಿಗೆ ಪತ್ರಿಕಾಗೋಷ್ಠಿ ಕರೆದು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಿದ್ದಾರೆ. ನಿಜವಾಗಿಯೂ ಅಲ್ಲಿ ನಡೆದಿರುವುದೇನು ಅವ್ಯವಹಾರವೇನು ಎನ್ನುವುದನ್ನು ತಿಳಿಸಿದ್ದಾರೆ.

   ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್

   ರೆಡ್ಡಿ ಅವರನ್ನು ಬಂಧಿಸಲು ಆಂಧ್ರ ಪ್ರದೇಶದಲ್ಲೂ ಬಂಧನಕ್ಕೆ ಸಿದ್ಧ ಮಾಡಲಾಗುತ್ತಿದೆ ಎನ್ನಲಾಗಿದೆ. ರೆಡ್ಡಿಯ ವಂಚನೆ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವತ್ರಿಕ ಚುನಾವಣೆಗೂ ಮುನ್ನ ರೆಡ್ಡಿಗೆ ಖೆಡ್ಡಾ ತೋಡಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿದೆ.

   ಬಂಧನ ಭೀತಿ: ಹೈದರಾಬಾದ್‌ನಲ್ಲಿ ಜಾಮೀನಿಗೆ ಮೊರೆ ಹೋದ ರೆಡ್ಡಿ

   ನಾಯ್ಡು ಹೀಗೆ ಮಾಡುವುದಕ್ಕೂ ಒಂದು ಕಾರಣವಿದೆ. ಲೋಕಸಭಾ ಚುನಾವಣೆಯಲ್ಲಿ ಜಗನ್ ರೆಡ್ಡಿಗೆ ಜನಾರ್ಧನ್​ ರೆಡ್ಡಿ ಸಹಕಾರ ನೀಡುವ ಭರವಸೆ ಕೊಟ್ಟಿದ್ದರಂತೆ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಚಂದ್ರಬಾಬು ನಾಯ್ಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

   English summary
   Andra Pradesh chief minister Chandrababu Naidu will visit Bengaluru on November 8 and said that he will meet chief minister H.D.Kumaraswamy and JDS supremo H.D.Devegowda to discuss about Janardhana Reddy case.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X