ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಶುಗರ್‌ ಖಾಸಗೀಕರಣಕ್ಕೆ ಎಎಪಿ ಬಿಡುವುದಿಲ್ಲ: ನಂಜಪ್ಪ ಕಾಳೇಗೌಡ

|
Google Oneindia Kannada News

ಬೆಂಗಳೂರು, ಜುಲೈ 12: ''ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ನಾಡಿನ ರೈತರಿಗಾಗಿ ಆರಂಭಿಸಿದ ಮೈಶುಗರ್‌ ಸಂಸ್ಥೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಭಾರೀ ವಿರೋಧ ಎದುರಿಸಬೇಕಾಗುತ್ತದೆ,'' ಎಂದು ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಆಮ್‌ ಆದ್ಮಿ ಪಾರ್ಟಿಯ ಯುವ ಘಟಕದ ಉಪಾಧ್ಯಕ್ಷರಾದ ಸಿಂಧು ಮಳವಳ್ಳಿಯವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡರವರು, ''ಮೈಶುಗರ್‌ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ವಿಧಾನಸಭಾ ಅಧಿವೇಶನದಲ್ಲಿ ಸಿ.ಎಂ.ಯಡಿಯೂರಪ್ಪನವರು ಹೇಳಿದ್ದರು. ಆದರೆ ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪನವರ ಮಕ್ಕಳು, ಮೊಮ್ಮಕಳು ಆಂಧ್ರ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ್ದು, ಖಾಸಗೀಕರಣದ ನಂತರ ಭಾರೀ ಪ್ರಮಾಣದ ಕಪ್ಪುಹಣವನ್ನು ಇದರಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಮೈಶುಗರ್‌ಗಾಗಿ ಎಎಪಿಯು 2016ರಲ್ಲೇ ಬೃಹತ್‌ ರ್ಯಾಲಿ ನಡೆಸಿದ್ದು, ಈಗ ಅದರ ಖಾಸಗೀಕರಣವನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ,'' ಎಂದು ಹೇಳಿದರು.

APP wont allow Privatisation of Mysore Sugar Company Limited: Nanjappa Kalegowda

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ವಿಶೇಷ ಶ್ರಮವಹಿಸಿ 1933ರಲ್ಲಿ ಮೈಶುಗರ್‌ ಕಾರ್ಖಾನೆಯನ್ನು ಆರಂಭಿಸಿದರು. ಇದನ್ನು ರಾಜ್ಯದ ಮೊದಲ ಕಾರ್ಖಾನೆ ಎಂದು ಗೌರವದಿಂದ ಕಾಣಲಾಗುತ್ತದೆ. ಸ್ವಾತಂತ್ರ್ಯ ಬಂದು 73 ವರ್ಷವಾದರೂ ರಾಜ್ಯವನ್ನು ಆಳಿದ ಯಾವ ಮುಖ್ಯಮಂತ್ರಿಗೂ ಇಂತಹ ಮತ್ತೊಂದು ಕಾರ್ಖಾನೆಯನ್ನು ಆರಂಭಿಸಲು ಸಾಧ್ಯವಾಗಿಲ್ಲ. ನಾಡಿನ ರೈತರ ಬದುಕನ್ನು ಸುಧಾರಿಸುವುದರಲ್ಲಿ ಮೈಶುಗರ್‌ ಪಾತ್ರ ಮಹತ್ವದ್ದಾಗಿದೆ. ಕಾರ್ಖಾನೆಯ ನೌಕರರು ಹಾಗೂ ಕಬ್ಬು ಬೆಳೆಗಾರರು ಮೈಶುಗರ್‌ ಸಂಸ್ಥೆಯೊಂದಿಗೆ ಆರ್ಥಿಕ ಸಂಬಂಧ ಮಾತ್ರವಲ್ಲದೇ ಭಾವನಾತ್ಮಕ ಸಂಬಂಧವನ್ನೂ ಹೊಂದಿದ್ದಾರೆ ಎಂದು ಕಾಳೇಗೌಡರವರು ತಿಳಿಸಿದರು.

Recommended Video

ನೂತನ ರೈಲ್ವೇ ಸಚಿವ Ashwini Vaishnaw ವಿಡಿಯೋ ವೈರಲ್ | Oneindia Kannada

''ಪ್ರತಿದಿನವೂ 5,000 ಟನ್ ಸಕ್ಕರೆ ಅರೆಯುವ ಸಾಮರ್ಥ್ಯವನ್ನು ಮೈಶುಗರ್‌ ಕಾರ್ಖಾನೆ ಹೊಂದಿದೆ. 14 ಸಾವಿರಕ್ಕೂ ಹೆಚ್ಚು ರೈತರು ಇದರ ಷೇರುದಾರರಾಗಿದ್ದಾರೆ. ಈ ಹಿಂದೆ 18ಕ್ಕೂ ಹೆಚ್ಚು ವರ್ಷಗಳ ಕಾಲ ಮೈಶುಗರ್‌ ಕಂಪನಿಯು ಶೇ. 20ರಿಂದ ಶೇ. 30ರಷ್ಟು ಡಿವಿಡೆಂಡ್ ನೀಡಿದ ಕೀರ್ತಿ ಹೊಂದಿದೆ. 14ಕ್ಕೂ ಹೆಚ್ಚು ಫಾರ್ಮ್‌ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿಯು ಮೈಶುಗರ್ ಸಂಸ್ಥೆಯ ಬಳಿಯಲ್ಲಿದೆ. ಇಷ್ಟು ಸಮೃದ್ಧವಾದ ಇತಿಹಾಸ ಹೊಂದಿರುವ ಸಂಸ್ಥೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದೆ. ಸರ್ಕಾರವು ಬಂಡವಾಳ ಹೂಡಿ ಸಂಸ್ಥೆಯನ್ನು ಆಧುನೀಕರಣಗೊಳಿಸಬೇಕೇ ಹೊರತು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಬಾರದು,'' ಎಂದು ನಂಜಪ್ಪ ಕಾಳೇಗೌಡ ಹೇಳಿದರು.

English summary
AAP won't allow Privitisation of Mysore Sugar Company Limited(Mysugar), we will protest against government decision: Nanjappa Kalegowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X