ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 25 ಕೊನೆ ದಿನ

ಬೆಂಗಳೂರು, ಮಾರ್ಚ್ 8: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆತಿಯಿಂದ 2016ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಹಾಗೂ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಕ್ಷೇತ್ರದ ವಿವಿಧ ರಂಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕರ್ನಾಟಕ ರಾಜ್ಯ ಸರ್ಕಾರ ಟೀಯೆಸ್ಸಾರ್, ಮೊಹರೆ ಹಣಮಂತರಾಯ, ಪರಿಸರ ಪತ್ರಿಕೋದ್ಯಮ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಟೀಯೆಸ್ಸಾರ್ ಪ್ರಶಸ್ತಿ: ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರಬೇಕು.
ಈ ವಾರ್ಷಿಕ ಪ್ರಶಸ್ತಿಯನ್ನು ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ನೀಡಲಾಗುತ್ತದೆ. ಪ್ರಶಸ್ತಿಯ ಮೊತ್ತ 1 ಲಕ್ಷ ರುಪಾಯಿ ಆಗಿದ್ದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ.

ಮೊಹರೆ ಹಣಮಂತರಾಯ ಪ್ರಶಸ್ತಿ: ಪ್ರಶಸ್ತಿಯು 1 ಲಕ್ಷ ರುಪಾಯಿ ಜೊತೆಗೆ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ. ಈ ವಾರ್ಷಿಕ ಪ್ರಶಸ್ತಿಯನ್ನು ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ನೀಡಲಾಗುತ್ತಿದ್ದು ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು ಹಾಗೂ ಕನ್ನಡ ಪತ್ರಿಕೋದ್ಯಮ ಕ್ಷೇತ್ರ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರಬೇಕು.

Pen

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು: ರಾಜ್ಯದೆಲ್ಲೆಡೆ ಅಭಿವೃದ್ಧಿಗೆ ಉತ್ತಮ ವಾತಾವರಣ ಕಲ್ಪಿಸಲು ಅನುಕೂಲವಾಗುವಂತೆ ಉತ್ತೇಜಿಸಲು ಅಭಿವೃದ್ಧಿ ಪತ್ರಿಕೋದ್ಯಮ ಹಾಗೂ ರಾಜ್ಯದಲ್ಲಿನ ಪರಿಸರ, ಪ್ರಕೃತಿ ಹಾಗೂ ನಿಸರ್ಗದ ಸಮತೋಲನ ಕಾಯ್ದುಕೊಳ್ಳಲು ನೆರವಾಗಿರುವ ಪತ್ರಕರ್ತರಿಗಾಗಿ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.

ಮುದ್ರಣ ಮಾಧ್ಯಮ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಕನಿಷ್ಠ 10 ವರ್ಷ ಅನುಭವ ಹೊಂದಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಪ್ರಶಸ್ತಿ ತಲಾ 50,000 ರುಪಾಯಿ, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ.

ಈ ಎಲ್ಲ ಪ್ರಶಸ್ತಿಗಳಿಗೆ ಪತ್ರಿಕಾ ಸಂಘಟನೆಗಳು ಮತ್ತು ಸಂಘ- ಸಂಸ್ಥೆಗಳು ನಾಮ ನಿರ್ದೇಶನಗಳನ್ನು ಮಾಡಬಹುದು. ಅಲ್ಲದೆ ಅಭ್ಯರ್ಥಿಗಳೇ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560 001 ಇಲ್ಲಿಗೆ ಮಾರ್ಚ್ 25ರೊಳಗಾಗಿ ಕಳುಹಿಸಿಕೊಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+