ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಸಾಧಾರಣ ಸಾಧಕ ಮಕ್ಕಳ ಪ್ರಶಸ್ತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಸೆ. 16: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2020-21 ನೇ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ ಸಾಂಸ್ಕೃತಿಕ, ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10,000 ರೂ. ನಗದು ಮತ್ತು ಪ್ರಶಸ್ತಿ ಪತ್ರ ಹೊಂದಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರ ಪಕ್ಕ, ಬೆಂಗಳೂರು-560029 ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 Applications invited for Exceptional Achievement Childrens Award in Bengaluru Urban District

ಮಕ್ಕಳ ಸೂಚ್ಯಂಕ: ಕೇರಳ ಪ್ರಥಮ, ಬಿಹಾರಕ್ಕೆ ಕೊನೆಯ ಸ್ಥಾನ ಮಕ್ಕಳ ಸೂಚ್ಯಂಕ: ಕೇರಳ ಪ್ರಥಮ, ಬಿಹಾರಕ್ಕೆ ಕೊನೆಯ ಸ್ಥಾನ

ಮಕ್ಕಳ ಕ್ಷೇತ್ರದ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 Applications invited for Exceptional Achievement Childrens Award in Bengaluru Urban District

Recommended Video

RCB ಈ ಸಲ ಕಪ್ ಗೆದ್ದೇ ಗೆಲ್ತಾರೆ , ಯಾಕೆ ಗೊತ್ತಾ | Oneindia Kannada

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಧರ್ಮಾರಾಂ ಕಾಲೇಜು ಅಂಚೆ, ಹೊಸೂರು ರಸ್ತೆ, ಬೆಂಗಳೂರು-560029 ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Under the Hoysala and Keladi Chennamma Award Scheme 2020-21, children under the age of 5 years and under 18 years who have excelled in the fields of innovation, logical achievement, sports, arts, culture and music are invited to be selected for the District Level Award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X