ಅನಿಲ ಭಾಗ್ಯಕ್ಕಾಗಿ ಅರ್ಜಿ ಆಹ್ವಾನ: ಅಟಲ್ ಜೀ ಕೇಂದ್ರದಲ್ಲಿ ಅರ್ಜಿ ಲಭ್ಯ
ಬೆಂಗಳೂರು, ಫೆಬ್ರವರಿ 3 :ಬಡ ಕುಟುಂಬಗಳಿಗೆ ಉಚಿತ ಅನಿಲ ಸಂಪರ್ಕ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.
ಆಯಾ ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿಗಳು ದೊರೆಯಲಿದೆ. ರಾಜ್ಯಾದ್ಯಂತ ಮೊದಲ ಹಂತವಾಗಿ 10 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯಾ ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿಗಳು ಸಿಗಲಿದೆ. ತಾಲೂಕು ಕೇಂದ್ರಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ಆಹಾರ ಇಲಾಖೆಯ ತಂತ್ರಾಂಶದ ಮೂಲಕ ಸ್ವೀಕರಿಸಲಾಗುತ್ತದೆ.
ಅರ್ಜಿ ಶುಲ್ಕ 50 ರೂ. ಇರಲಿದ್ದು, ಸದರಿ ಅರ್ಜಿ ಶುಲ್ಕವನ್ನು ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯ ಬಳಕೆದಾರರ ನಿಧಿಗೆ ಜಮೆ ಮಾಡಲು ನಾಡ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಇಲಾಖೆ ಸೂಚನೆ ನೀಡಿದೆ.

ಏನಾದರೂ ತಾಂತ್ರಿಕ ದೋಷ ಕಂಡುಬಂದಲ್ಲಿ ಕೂಡಲೇ ಆಹಾರ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದು. ಪ್ರತಿ ಫಲಾನುಭವಿಗೆ ಅನಿಲ ಸಂಪರ್ಕ ಕಲ್ಪಿಸಲು ಸರ್ಕಾರ 4040 ರೂ. ಖರ್ಚು ಮಾಡಲಿದೆ.












Click it and Unblock the Notifications