ಬೆಂಗಳೂರಲ್ಲಿ ಜನೌಷಧಿ ಮಳಿಗೆ ಪ್ರಾರಂಭಿಸಲು ಗುಡ್‌ನ್ಯೂಸ್, ಯಾರೆಲ್ಲ ಅರ್ಜಿ ಹಾಕಬಹುದು ?
ಬೆಂಗಳೂರಿನಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಬೇಕು ಎನ್ನುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಗುಡ್‌ನ್ಯೂಸ್ ಕೊಟ್ಟಿದೆ.ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ನಾಗಪ್ಪ ಬ್ಲಾಕ್, ಸುಬೇದಾರ್ ಪಾಳ್ಯ ಹಾಗೂ ನೇತಾಜಿ ವೃತ್ತದ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಪ್ರಾರಂಭಿಸುವುದಕ್ಕೆ ಸುವರ್ಣ ಅವಕಾಶ ಇಲ್ಲಿದೆ.
ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ಬೆಲೆಯಲ್ಲಿ ಕೇಂದ್ರ ಸರ್ಕಾರ ನೀಡುತ್ತಿದೆ. ಇದೀಗ ಜನೌಷಧಿ ಕಾರ್ಯಕ್ರಮದ ಭಾಗವಾಗಿ ಜನೌಷಧಿ ಮಳಿಗೆಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು ಹಾಗೂ ಪದವಿ ಫಾರ್ಮಸಿಸ್ಟ್ ಅವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಯಾವೆಲ್ಲ ದಾಖಲೆಗಳು ಬೇಕು ಎನ್ನುವ ಮಾಹಿತಿ ಇಲ್ಲಿದೆ.

ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ದೇಶದ ವಿವಿಧ ಭಾಗದಲ್ಲಿ ಜಾರಿ ಮಾಡಲಾಗುತ್ತಿದೆ. ಈಗಾಗಲೇ ದೇಶದಾದ್ಯಂತ ಸಾವಿರಾರು ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಗುಣಮಟ್ಟದ ಹಾಗೂ ಕಡಿಮೆ ಬೆಲೆ ಔಷಧಿಗಳನ್ನು ಬಡವರಿಗೆ ತಲುಪಿಸುವುದು. ಇದು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ನಡೆದಿರುವ ಬಹುದೊಡ್ಡ ಬದಲಾವಣೆಗಳಲ್ಲಿ ಒಂದಾಗಿದೆ. ಇದೀಗ ಈ ಕೇಂದ್ರಗಳನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಬೇಕು ಎಂದು ಆಸೆಪಡುವವರಿಗೆ ಇಲ್ಲೊಂದು ಗುಡ್‌ನ್ಯೂಸ್ ಅನ್ನು ಬಿಬಿಎಂಪಿ ಕೊಟ್ಟಿದೆ.
ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು ಹಾಗೂ ಫಾರ್ಮಸಿಸ್ಟ್ ಪದವಿ ಮಾಡಿರುವವರು ಹಾಗೂ ನಿರುದ್ಯೋಗಿ ಯುವಕರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಯಾವ ಅರ್ಜಿ ಸಲ್ಲಿಸಬೇಕು ಹಾಗೂ ಕೊನೆಯ ದಿನಾಂಕ ಯಾವಾಗ ಎನ್ನುವ ವಿವರ ಇಲ್ಲಿದೆ.
* ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು: ಸಂಸ್ಥೆಯ ನೋಂದಣಿ ಪತ್ರ ಹಾಗೂ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರ. ಫಾರ್ಮಸಿಸ್ಟ್‌ಗಳ ಪ್ರಮಾಣ ಪತ್ರ, ಆಧಾರ್ ಮತ್ತು ಪಾನ್ ಕಾರ್ಡ್ ಹಾಗೂ ಅರ್ಜಿ ಸಲ್ಲಿಸುತ್ತಿರುವ ಜನೌಷಧಿ ಕೇಂದ್ರಗಳ ವಿಳಾಸವನ್ನು ಸಲ್ಲಿಸಬೇಕು.
* ಫಾರ್ಮಸಿಸ್ಟ್ ಪದವಿ ಮಾಡಿರುವವರು ಹಾಗೂ ನಿರುದ್ಯೋಗಿ ಯುವಕರು: ಫಾರ್ಮಸಿಸ್ಟ್‌ಗಳ ಪ್ರಮಾಣ ಪತ್ರ, ಆಧಾರ್ ಮತ್ತು ಪಾನ್ ಕಾರ್ಡ್, ಅರ್ಜಿ ಸಲ್ಲಿಸುತ್ತಿರುವ ಜನೌಷಧಿ ಕೇಂದ್ರಗಳ ವಿಳಾಸ ಸಲ್ಲಿಸಬೇಕು.
ಎಲ್ಲಿ ಅರ್ಜಿ ಸಲ್ಲಿಸಬೇಕು: ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಬೇಕು ಎನ್ನುವವರು ಬಿಬಿಎಂಪಿಯ ಆರೋಗ್ಯಾಧಿಕಾರಿ (ಪಶ್ಚಿಮ) ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಭಾಷ್ಯಂ ಪಾರ್ಕ್, ಶೇಷಾದ್ರಿಪುರಂ, ಬೆಂಗಳೂರು-20 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 27 ರಿಂದ ಜನವರಿ 28ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 4.00 ರವರೆಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ.
ಈ ಸಂಬಂಧ ಯಾವುದಾದರೂ ಅನುಮಾನಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗಡೆ ಅವರ ಮೊಬೈಲ್ ಸಂಖ್ಯೆ 94806 88561ಕ್ಕೆ ಕರೆ ಮಾಡಬಹುದು ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications