ಉಚಿತ ಶಿಕ್ಷಣ : ಮೊರಾರ್ಜಿ ದೇಸಾಯಿ ಕಾಲೇಜಿಗೆ ಅರ್ಜಿ ಹಾಕಿ
ಬೆಂಗಳೂರು, ಮೇ 21 : ಬೆಂಗಳೂರು ನಗರ ಜಿಲ್ಲೆ ಅಡಕ ಮಾರನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿಗೆ 2015-16ನೇ ಸಾಲಿನ ಪ್ರಥಮ ಪಿಯುಸಿಗೆ ಪ್ರವೇಶಕ್ಕಾಗಿ ಅರ್ಹ ಹಿಂದುಳಿದ ವರ್ಗಗಳ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 27, 2015.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ. ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. [ಹಾಸನ ವಿಜ್ಞಾನ ಕಾಲೇಜಿಗೆ ಅರ್ಜಿ ಆಹ್ವಾನ]

ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಾರ್ಷಿಕ 44, 500 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1 ರ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಆದಾಯ ಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿದೆ. [ದ್ವಿತೀಯ ಪಿಯು ಫಲಿತಾಂಶ : ವಿದ್ಯಾರ್ಥಿಗಳ ಯಶಸ್ಸಿನ ಕಥೆ]
ಅರ್ಜಿ ಎಲ್ಲಿ ಸಿಗುತ್ತದೆ : ಅರ್ಜಿಗಳು ಜಿಲ್ಲಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಅಡಕಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಹಾಗೂ ಎಲ್ಲಾ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ದೊರೆಯುತ್ತವೆ.
ಹೆಚ್ಚಿನ ಮಾಹಿತಿಗೆ 9480817602 ಹಾಗೂ 7259613001 ಮೊಬೈಲ್ ನಂಬರ್‌ಗಳಿಗೆ ಕರೆ ಮಾಡಬಹುದಾಗಿದೆ.












Click it and Unblock the Notifications