E-Khata: ಈಗ ಇನ್ನಷ್ಟು ಸುಲಭ, ಅರ್ಜಿ ಹಾಕಿ 2 ದಿನದಲ್ಲೇ ಇ-ಖಾತಾ ಪಡೆಯಿರಿ

ಬೆಂಗಳೂರು, ಮಾರ್ಚ್‌ 31: ಕರ್ನಾಟಕ ಸರ್ಕಾರ ಆಸ್ತಿಗಳ ಮಾರಾಟ, ಖರೀದಿಗೆ ಇ-ಖಾತಾ ಕಡ್ಡಾಯಗೊಳಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಈಗ ಇ-ಖಾತಾ ಪಡೆಯುವುದು ಕಡ್ಡಾಯವಾಗಿದೆ. ಆದರೆ ಈ ವಿಚಾರದಲ್ಲಿ ಆಗುತ್ತಿರುವ ಗೊಂದಲಗಳನ್ನು ತಪ್ಪಿಸಲು ಬಿಬಿಎಂಪಿ ಹೊಸ ಕ್ರಮ ಕೈಗೊಂಡಿದೆ. ಅರ್ಜಿ ಸಲ್ಲಿಸಿದ ಬಳಿಕ ಹೆಚ್ಚು ದಿನ ಕಾಯುವ ಅಗತ್ಯವೇ ಇಲ್ಲ ಸುಲಭವಾಗಿ ಇ-ಖಾತಾ ಜನರ ಕೈ ಸೇರಲಿದೆ.

ಬಿಬಿಎಂಪಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ಜನರಿಗೆ ಸುಲಭವಾಗಿ ಇ-ಖಾತಾ ದೊರೆಯುವಂತೆ ಆಗಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಒನ್ ಕೇಂದ್ರದಲ್ಲಿಯೂ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Apply And Get E Khata In Two Days In BBMP Limits

ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?; ಇ-ಖಾತಾ ಪಡೆಯಲು ಜನರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಛೇರಿಗೆ ಅಲೆದಾಟ ನಡೆಸುವ ಅಗತ್ಯವಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಬೇಕಾದ ಜನರು ಅರ್ಜಿ ಸಲ್ಲಿಸಿದ ಎರಡು ದಿನಗಳಲ್ಲಿ ತಮ್ಮ ಅಂತಿಮ ಇ-ಖಾತಾವನ್ನು ಪಡೆಯಲು ಬಿಬಿಎಂಪಿ ವ್ಯವಸ್ಥೆ ಮಾಡಿದೆ.

ಮೊದಲು ಅರ್ಜಿದಾರರು ತಮ್ಮ ಮಾಹಿತಿಯನ್ನು ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್ bbmpeaasthi.karnataka.gov.in ನಲ್ಲಿ ಸಲ್ಲಿಸಬೇಕು. ಸಹಾಯಕ ಕಂದಾಯ ಅಧಿಕಾರಿಗಳು (ಎಆರ್‌ಒ) ಮತ್ತು ಕೇಸ್‌ ವರ್ಕರ್‌ಗಳು ನಿಗದಿತ ಸಮಯದೊಳಗೆ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ವಿಶೇಷ ಆಯುಕ್ತರು ಹೇಳಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ ಇ-ಖಾತಾ ಪಡೆಯಲು ಬೆಂಗಳೂರು ನಗರದಲ್ಲಿ ಅರ್ಜಿ ಸಲ್ಲಿಸುತ್ತಿರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದುವರೆಗೂ ಸ್ವೀಕರಿಸಲಾದ ಸುಮಾರು 2.9 ಲಕ್ಷ ಅರ್ಜಿಗಳಲ್ಲಿ 2.7 ಲಕ್ಷ ಇ-ಖಾತಾಗಳನ್ನು ನೀಡಲಾಗಿದೆ. ಎಲ್ಲಾ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳು ಅರ್ಜಿಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳೂತ್ತಿವೆ.

ಜನರು ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಿ ಇ-ಖಾತಾ ಪಡೆಯಲು ಅನುಕೂಲವಾಗುವಂತೆ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರು ಇ-ಖಾತಾವನ್ನು ಸರಾಗವಾಗಿ ಪಡೆಯಲು ಅನುಕೂಲ ಮಾಡಿಕೊಡಲು ಪಾಲಿಕೆ ವ್ಯಾಪ್ತಿಯ 8 ವಲಯಗಳು ಮತ್ತು 64 ಸಹಾಯಕ ಕಂದಾಯ ಅಧಿಕಾರಿಗಳೊಂದಿಗೆ ಪ್ರತಿದಿನ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ಮಾಡಿ ನಿರ್ದೇಶನಗಳನ್ನು ನೀಡಲಾಗುತ್ತಿದೆ.

ಈಗಾಗಲೇ ಕರ್ನಾಟಕ ಸರ್ಕಾರ ಸಹ ಇ-ಖಾತಾ ಪಡೆಯಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆ/ ನಗರ ಸ್ಥಳೀಯ ಸಂಸ್ಥೆಗಳು ನಾಗರೀಕರ ಅನಕೂಲಕ್ಕಾಗಿ ಇ-ಆಸ್ತಿ ತಂತ್ರಾಂಶದಲ್ಲಿ ನಮೂನೆ 2/3 ಅನ್ನು ಸೃಜಿಸಿ ನಾಗರೀಕರಿಗೆ ಒದಗಿಸಲು ಮೇಳಗಳನ್ನು ಆಯೋಜಿಸಬೇಕು ಎಂದು ಸೂಚನೆ ನೀಡಿದೆ.

ಅಪಾರ್ಟ್‌ಮೆಂಟ್/ ಲೇಔಟ್ ಅನ್ನು ಗುರುತಿಸಿ ಆ ಭಾಗದಲ್ಲಿನ ಸಕ್ರಿಯ ನಾಗರಿಕ ಗುಂಪುಗಳು ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ವ್ಯಕ್ತಿಯ ಸಹಾಯ ಪಡೆದು ಮೇಳಗಳನ್ನು ನಡೆಸಬೇಕು. ಜನರು ಸಲ್ಲಿಸಬೇಕಾದ ಮಾಹಿತಿ/ ದಾಖಲೆಗಳ ವಿವರವನ್ನು ತಿಳಿಸಿಕೊಡಬೇಕು. ಅಧಿಕೃತ ಸ್ವತ್ತಿನ ಮಾಲೀಕರು ಸಲ್ಲಿಸಬೇಕಾದ ದಾಖಲೆಗಳು ಮತ್ತು ಅನಧಿಕೃತ ಸ್ವತ್ತಾಗಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಯನ್ನು ನೀಡಬೇಕು ಎಂದು ನಿರ್ದೇಶನ ನೀಡಿದೆ.

Take a Poll

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+