ಬೆಸ್ಕಾಂನಲ್ಲಿ 189 ಸಹಾಯಕ ಲೈನ್‌ಮೆನ್ ಹುದ್ದೆ ಖಾಲಿ
ಬೆಂಗಳೂರು, ಫೆ. 20 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸಹಾಯಕ ಲೈನ್ ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 189 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13.
ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಬೆವಿಕಂ ಕಂಪನಿಯ ನೌಕರರೆಂದು ಪರಿಗಣಿಸಲಾಗುತ್ತದೆ. ಬೆಂವಿಕಂ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳಗಳಿಗೆ ನಿಯೋಜನೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು. [ಅರ್ಜಿ ತುಂಬುವ ಮಾಹಿತಿಯನ್ನು ಓದಿ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಮತ್ತು ಲೈನ್‌ಮೆನ್ ಟ್ರೇಡ್/ಎಲೆಕ್ಟ್ರೀಷಿಯನ್ ಟ್ರೇಡ್ (ಐಟಿಸಿ) ಕೋರ್ಸ್ ಪೂರ್ಣಗೊಳಿಸಿದ ಪ್ರಮಾಣ ಪತ್ರ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಬೇರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳು. [ಬೆಸ್ಕಾಂನಲ್ಲಿ 628 ಹುದ್ದೆಗಳು ಖಾಲಿ ಇವೆ ಅರ್ಜಿ ಹಾಕಿ]
ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ ಪ್ರವರ್ಗ1/2ಎ/2ಬಿ/3ಎ/3ಬಿ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿರುತ್ತದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications