ಬೆಸ್ಕಾಂನಲ್ಲಿ 238 ಹುದ್ದೆಗಳು ಖಾಲಿ ಇವೆ ಅರ್ಜಿ ಸಲ್ಲಿಸಿ
ಬೆಂಗಳೂರು, ಮಾ. 24 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 238 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಏಪ್ರಿಲ್ 9 ಕೊನೆಯ ದಿನವಾಗಿದೆ.
ಸಹಾಯಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಬೆವಿಕಂ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡಲಾಗುತ್ತದೆ. ಖಾಲಿ ಇರುವ ಸ್ಥಳಗಳಿಗೆ ಸಮಾಲೋಚನೆ ಮುಖಾಂತರ ಮೆರಿಟ್ ಆಧಾರದ ಮೇಲೆ ಸ್ಥಳ ನಿಯುಕ್ತಿ ಮಾಡಲಾಗುತ್ತದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಿದ್ಯಾರ್ಹತೆ : ಕರ್ನಾಟಕ ರಾಜ್ಯದಲ್ಲಿ ಮನ್ನಣೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪಡೆದಿರುವ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಇತರೆ ವಿಷಯದಲ್ಲಿ ವಿದ್ಯಾರ್ಹತೆ ಹೊಂದಿರುವ ಅಣ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. [ಅರ್ಜಿ ಸಲ್ಲಿಸಲು ವಿಳಾಸ]
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕದೊಳಗೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕನ್ನಡ ಓದುವ ಮತ್ತು ಬರೆಯುವ ಜ್ಞಾನ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ]
ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂ/ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕ : ಸಾಮಾನ್ಯ/ಪ್ರವರ್ಗ 1/2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ 500 ರೂ., ಪ.ಜಾ/ಪ.ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 250 ರೂ.ಗಳು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಲಭ್ಯವಿರುವ ಇ-ಚಲನ್ ಮೂಲಕ ಗಣಕೀಕೃತ ಅಂಚೆಕಚೇರಿಯಲ್ಲಿ ಶುಲ್ಕವನ್ನು ಪಾವತಿ ಮಾಡಬೇಕು.
ಅರ್ಜಿಯನ್ನು www.bescom.org ವೆಬ್‌ಸೈಟ್ ಮೂಲಕ ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಒಂದು ವೇಳೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿ ಮಾಡದಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.











Click it and Unblock the Notifications