ಗೃಹ ರಕ್ಷಕ ದಳದಲ್ಲಿ ಕೆಲಸ ಖಾಲಿ ಇದೆ ಅರ್ಜಿ ಹಾಕಿ
ಬೆಂಗಳೂರು, ಫೆ. 14 : ಬೆಂಗಳೂರು ನಗರ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಗೃಹ ರಕ್ಷಕ ದಳ ಕಛೇರಿಗಳಲ್ಲಿ ಖಾಲಿ ಇರುವ ಗೌರವ ಸಮಾದೇಷ್ಟರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಧಿಸೂಚನೆ ಪ್ರಕಟವಾದ ನಂತರ ಮೂವತ್ತು ದಿನಗಳು.
ಈ ಹುದ್ದೆಯು ಸಂಪೂರ್ಣವಾಗಿ ಸ್ವಯಂಸೇವೆಯ ಹುದ್ದೆಯಾಗಿದ್ದು 50 ವರ್ಷದೊಳಗಿನ ಪದವಿದರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಜಿಲ್ಲಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ವೈಯಕ್ತಿಕ ವಿವರ ಹಾಗೂ ದೃಢೀಕರಿಸಿದ ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ದೂರವಾಣಿ ಸಂಖ್ಯೆಗಳು ಮತ್ತು ಸ್ಥಳೀಯ ಗೌರವಾನ್ವಿತ ವ್ಯಕ್ತಿಗಳಿಂದ, ಇಲಾಖಾ ಮುಖ್ಯಸ್ಥರಿಂದ (ಉದ್ಯೋಗಸ್ಥರಾಗಿದ್ದಲ್ಲಿ) ಸ್ಥಿರೀಕರಣ ಪತ್ರಗಳನ್ನು ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳು, ಬೆಂಗಳೂರು ಇವರಿಗೆ 30 ದಿನಗಳೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. [ಉದ್ಯೋಗದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]
ಕೊಪ್ಪಳದಲ್ಲಿ ತರಬೇತಿ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ವತಿಯಿಂದ ಸ್ವ-ಉದ್ಯೋಗ ಆಧಾರಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಮಾರ್ಚ್ 2 ರಿಂದ ಪ್ರಾರಂಭವಾಗಲಿದ್ದು 6 ದಿನಗಳ ಕಾಲ ನಡೆಯಲಿದೆ. ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ.
18 ರಿಂದ 45 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿ ಯುವಕರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ತಮ್ಮ ಹೆಸರು, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ವಿಷಯದಲ್ಲಿ ಪ್ರಾಥಮಿಕ ಜ್ಞಾನ ಮುಂತಾದ ವಿವರಗಳನ್ನೊಳಗೊಂಡ ಮಾಹಿತಿಯನ್ನು ಫೋನ್ ಮೂಲಕ ವಿವರ ನೀಡಿ ತರಬೇತಿಗೆ ಆಯ್ಕೆಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 08284-220807, 9483485489, 9482188780ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications