ನಿವೇಶನ, ಮನೆಗಳ ಹಂಚಿಕೆಗೆ ಅರ್ಜಿ ಕರೆದ ಗೃಹ ಮಂಡಳಿ
ಬೆಂಗಳೂರು, ಡಿಸೆಂಬರ್ 15: ಕರ್ನಾಟಕ ಗೃಹ ಮಂಡಳಿ ಸೂರ್ಯನಗರ 4ನೇ ಹಂತದ ವಸತಿ ಯೋಜನೆಗೆ ಬೇಡಿಕೆ ಸಮೀಕ್ಷೆಯನ್ನು ಪ್ರಕಟಿಸಿದೆ. ಆಸಕ್ತರು ನಿವೇಶನ/ಮನೆಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು 16/1/2020 ಕೊನೆಯ ದಿನವಾಗಿದೆ.
ಗೃಹ ಮಂಡಳಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ, ಇಂಡ್ಲವಾಡಿ ಮತ್ತು ಬಗ್ಗನದೊಡ್ಡಿ ಗ್ರಾಮಗಳಲ್ಲಿ 1938 ಎಕರೆ ಜಮೀನಿನಲ್ಲಿ ಉತ್ತಮ ಗುಣಮಟ್ಟದ ನಿವೇಶನ/ಮನೆಗಳನ್ನು ಅಭಿವೃದ್ಧಿ ಪಡಿಸಲಿದೆ.
ಯೋಜನೆಯಡಿ ಸಿಮೆಂಟ್ ರಸ್ತೆ, ಒಳಚರಂಡಿ ವ್ಯವಸ್ಥೆ, ಬೀದಿ ದೀಪ, ನೀರು ಸರಬರಾಜು ಇನ್ನಿತರೆ ಉತ್ತಮ ನಾಗರಿಕ ಸೌಕರ್ಯಕ್ಕಾಗಿ ವಾಣಿಜ್ಯ ನಿವೇಶನಗಳು ಮತ್ತು ಶಾಲೆ ಹಾಗೂ ಉದ್ಯಾನವನ ಮುಂತಾದ ಉದ್ದೇಶಗಳಿಗಾಗಿ ನಿವೇಶನ ಮೀಸಲಾಗಿಡಲಾಗಿದೆ.
ಈ ಯೋಜನೆಯಡಿ ನಿಯಮಾವಳಿಗೆ ಅನುಗುಣವಾಗಿ ನಿವೇಶನಗಳನ್ನು ಹೊಂದಲು ಬಯಸುವ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಿವೇಶನಗಳಿಗೆ ಮಂಡಳಿ ವತಿಯಿಂದ ನಿಗದಿಪಡಿಸಿದ ಅಂದಾಜು ದರ ಪ್ರತಿ ಚದರ ಅಡಿಗೆ ರೂ. 1500 ರೂ., ಪ್ರತಿ ಚದರ ಮೀಟರ್‌ಗೆ 16,146 ರೂ.ಗಳು.

ಅರ್ಜಿಗಳ ನೋಂದಣಿ
ಅರ್ಜಿ ಸಲ್ಲಿಸುವವರು ಅರ್ಜಿ ಶುಲ್ಕ 100 ರೂ. ಪಾವತಿ ಮಾಡಿ. ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಯೋಜನಾ ಕಚೇರಿಯಿಂದ ಹಾಗೂ ಸಂಬಂಧಿಸಿದ ಬ್ಯಾಂಕ್ ಶಾಖೆಗಳಿಂದ ಪಡೆಯತಕ್ಕದ್ದು.
ಎಸ್. ಸಿ. ರೋಡ್ ಕಾರ್ಪೊರೇಷನ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಜಯನಗರ, Indusind bank ಬಸವನಗುಡಿ ಇಲ್ಲಿ ಅರ್ಜಿಗಳು ಸಿಗಲಿವೆ.

ನಿವೇಶನಗಳ ವಿವರಗಳು
ಆನೇಕಲ್ ತಾಲೂಕಿನ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ, ಇಂಡ್ಲವಾಡಿ ಮತ್ತು ಬಗ್ಗನದೊಡ್ಡಿ ಗ್ರಾಮಗಳಲ್ಲಿಇರುವ ಸ್ವತ್ತುಗಳ ಅಳತೆ ಮೀಟರ್‌ಗಳಲ್ಲಿ, ನೋಂದಣಿ ಶುಲ್ಕ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ನೋಂದಣಿ ಶುಲ್ಕ ಮತ್ತು ಆರಂಭಿಕ ಠೇವಣಿ ಹಣವನ್ನು Housing Commissioner, Karnataka Housing Board, Bangalore (Payable at Bangalore) ಇವರ ಹೆಸರಿನಲ್ಲಿ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬ್ಯಾಂಕ್‌ಗಳಲ್ಲಿ ಆರಂಭಿಕ ಠೇವಣಿ ಹಣವನ್ನು ಪಾವತಿಸಬಹುದು.
ಸ್ವತ್ತುಗಳನ್ನು ಪ್ರವರ್ಗಗಳಲ್ಲಿ ಮೀಸಲಾತಿಯನ್ವಯ ಕಾಯ್ದಿರಿಸಿ ಹಂಚಿಕೆ ಮಾಡಲಾಗುತ್ತದೆ. ಆಯಾ ಪ್ರವರ್ಗವಾರು ಅಡಿಯಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸುವವರು ಸಂಬಂಧಿಸಿದ ದೃಢೀಕೃತ ದಾಖಲಾತಿಯನ್ನು ಅರ್ಜಿಯನ್ನು ಸಲ್ಲಿಸಬೇಕು.

ಷರತ್ತುಗಳು ಏನು?
ಆರ್ಥಿಕ ದುರ್ಬಲ ವರ್ಗದ ನಿವೇಶನಗಳಿಗೆ ಅರ್ಜಿ ಸಲ್ಲಿಸುವವರು ತಮ್ಮ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದ ಅರ್ಜಿದಾರರು ರೂ. 32000 ಮತ್ತು ನಗರ ಪ್ರದೇಶದ ಅರ್ಜಿದಾರರು ತಮ್ಮ ಕುಟುಂಬದ ವಾರ್ಷಿಕ ವರಮಾನ 87,600 ಮೀರದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಹೆಚ್ಚಿನ ಮಾಹಿತಿಗಾಗಿ ಜನರು ಸಹಾಯಕ ಕಾರ್ಯಪಾಲಕ ಅಭಿಯಂತರರು, ಕರ್ನಾಟಕ ಗೃಹ ಮಂಡಳಿ, ಸೂರ್ಯ ನಗರ ಯೋಜನಾ ಕಚೇರಿ, ಸೂರ್ಯ ನಗರ ಬೆಂಗಳೂರು ಇವರನ್ನು ಖುದ್ದಾಗಿ ಅಥವ ದೂರವಾಣಿ ಮೂಲಕ ಸಂಪರ್ಕಿಸಬಹುದು. 9448373762/9886647084
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications